ಸೆ.7 : ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ‘ಶ್ರೀ ಕೃಷ್ಣ ಲೀಲೋತ್ಸವ’

0

ನರಿಮೊಗರು :ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ‘ಶ್ರೀ ಕೃಷ್ಣ ಲೀಲೋತ್ಸವ’ ಕಾರ್ಯಕ್ರಮ ಸೆ.7 ರಂದು ಸಂಸ್ಥೆಯ ಗೋಪಾಲಕೃಷ್ಣ ಸಭಾಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಕಾಯ ಚಿಕಿತ್ಸಾ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಸುಜಯ್ ಕೃಷ್ಣ ತಂತ್ರಿ ಕೆಮ್ಮಿಂಜೆ ರವರು ಉದ್ಘಾಟಿಸುವರು. ಸಭಾಧ್ಯಕ್ಷತೆಯನ್ನು ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಶಿಬರ ಜಯರಾಮ ಕೆದಿಲಾಯ ವಹಿಸಲಿದ್ದಾರೆ. ಮುಖ್ಯ ಅಭ್ಯಾಗತರಾಗಿ ಉದ್ಯಮಿಗಳಾದ ಮೋಹನ್ ಬಾಬು ಜೆ.,ಅಶ್ವಿನಿ ರಾಜೇಶ್ ಪಾಲ್ಗೊಳ್ಳುವರು.

ಬೆಳಿಗ್ಗೆ 10ರಿಂದ ವಿದ್ಯಾರ್ಥಿಗಳಿಗೆ, ಪೋಷಕರಿಗೆ,ಶಿಕ್ಷಕರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದೆ.ಮಧ್ಯಾಹ್ನ ವಿಶೇಷ ಭೋಜನ ವ್ಯವಸ್ಥೆ ಇದೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಸಂಸ್ಥೆಯ ಸಂಚಾಲಕರಾದ ಎಚ್.ಭಾಸ್ಕರ ಆಚಾರ್ ಹಿಂದಾರು,ಮುಖ್ಯಶಿಕ್ಷಕಿ ಜಯಮಾಲಾ ವಿ.ಎನ್.,ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ರಾಕೇಶ್ ರೈ ಕೆಡೆಂಜಿ, ವಿದ್ಯಾರ್ಥಿ ನಾಯಕ ಪ್ರಥಮ್ ಕೆ.ಜೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here