ಸವಣೂರು : ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಫ್ರೆಶರ್ಸ್  ಡೇ

0

ಸವಣೂರು : ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಪದವಿಗೆ ಸೇರಿದ ವಿದ್ಯಾರ್ಥಿಗಳನ್ನು ಸ್ವಾಗತಿಸುವ ಕಾರ್ಯಕ್ರಮ ಫ್ರೆಶರ್ಸ್ ಡೇ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿದ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ.ಸೀತಾರಾಮ ರೈ ಸವಣೂರು  ಮಾತನಾಡಿ, ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಹೊಸದಾಗಿ ಸೇರಿದ ವಿದ್ಯಾರ್ಥಿಗಳು ಒಟ್ಟಾಗಿ ಸಂಸ್ಥೆಯ ಪಠ್ಯ ಹಾಗೂ ಪಠ್ಯತರ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವಂತೆ ಸಲಹೆ ನೀಡಿದರು.ವಿದ್ಯಾರ್ಥಿಗಳಿಗೆ ಕಲಿಕೆ ಪೂರಕವಾಗಿರುವ ಎಲ್ಲಾ ವ್ಯವಸ್ಥೆಗಳನ್ನು ಸಂಸ್ಥೆ ನೀಡುತ್ತಿದೆ ಎಂದರು.

 ಅಧ್ಯಕ್ಷತೆ ವಹಿಸಿದ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅಶ್ವಿನ್ ಎಲ್ ಶೆಟ್ಟಿ ಅವರು ಮಾತನಾಡಿ, ವಿದ್ಯಾರ್ಥಿಗಳ ಹಾಗೂ ಶಿಕ್ಷಕರ ಜವಬ್ದಾರಿಯನ್ನು ಮನದಟ್ಟು ಮಾಡಿಕೊಡುವುದರ ಜೊತೆಗೆ ವಿದ್ಯಾರ್ಥಿಗಳ ಕಲಿಕಾ ಜೀವನಕ್ಕೆ ಶುಭ ಹಾರೈಸಿದರು.ಕಾಲೇಜಿನ ಪ್ರಾಚಾರ್ಯ ಡಾ.ನಾರಾಯಣ ಮೂರ್ತಿ  ವಿದ್ಯಾರ್ಥಿಗಳಿಗೆ ಶುಭಹಾರೈಕೆಯ ಮಾತುಗಳನ್ನಾಡಿದರು.ವೇದಿಕೆಯಲ್ಲಿ ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲ ಸೀತಾರಾಮ ಕೇವಳ ಹಾಗೂ ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಉಪಪ್ರಾಂಶುಪಾಲರಾದ ಶೇಷಗಿರಿ ಎಂ.ಉಪಸ್ಥಿತರಿದ್ದರು. 

ವಿದ್ಯಾರ್ಥಿಗಳಾದ ಸಫಾ ಸ್ವಾಗತಿಸಿ , ಶ್ರಾವ್ಯವಾಣಿ ಪ್ರಾರ್ಥಿಸಿದರು.ಸ್ವಾತಿ ವಂದಿಸಿದರು. ಶಮೀರ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here