ಪುತ್ತೂರು:ಯಾದವ ಸಭಾ ಪ್ರಾದೇಶಿಕ ಸಮಿತಿ ಆರ್ಲಪದವು ಪಾಣಾಜೆ ಇದರ ವತಿಯಿಂದ 17ನೇ ವರ್ಷದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಠಮಿಯಿ ಸೆ.6ರಂದು ಆರ್ಲಪದವು ಶ್ರೀ ಸುಬ್ರಹ್ಮಣ್ಯೇಶ್ವರ ಭಜನಾ ಮಂದಿರದ ವಠಾರದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ, ಕ್ರೀಡಾಕೂಟಗಳೊಂದಿಗೆ ನಡೆಯಲಿದೆ.
ವೇ.ಮೂ ಗೋಪಾಲಕೃಷ್ಣ ಅಡಿಗ ಅಪಿನಿಮೂಲೆಯವರ ನೇತೃತ್ವದಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮದಲ್ಲಿ ಬೆಳಿಗ್ಗೆ ಗಣಪತಿ ಹೋಮ, ಭಜನೆ, ಮಧ್ಯಾಹ್ನ ಶ್ರೀಕೃಷ್ಣಾರ್ಪಣ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಪಲ್ಲಪೂಜೆ ನಡೆಯಲಿದೆ.
ವಿವಿಧ ಸ್ಪರ್ಧಾಕಾರ್ಯಕ್ರಮಗಳಲ್ಲಿ ಅಂಗನವಾಡಿ ಪುಟಾಣಿಗಳು, ಪ್ರಾಥಮಿಕ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ, ಮಹಿಳೆಯರು, ಪುರುಷರಿಗೆ ವಿವಿಧ ಮನೋರಂಜನಾ ಸ್ಪರ್ಧೆಗಳು, ಕ್ರೀಡಾಕೂಟಗಳು ನಡೆಯಲಿದೆ.ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವನ್ನು ಆಲ್ ಇಂಡಿಯಾ ಓಪನ್ ಮಾಸ್ಟರ ಬ್ಯಾಡ್ಮಿಂಟನ್ ವಿನ್ನರ್ ಆಗಿರುವ ಸಿದ್ದಾರ್ಥ್ ಯಾದವ್ ನೀರ್ಚಾಲ್ ಉದ್ಘಾಟಿಸಲಿದ್ದಾರೆ. ಈ ಪಂದ್ಯಾಟದಲ್ಲಿ ವಿಜೇತರಾದವರಿಗೆ ಪ್ರಥಮ ರೂ.2000 ದ್ವಿತೀಯ ರೂ.1000 ಹಾಗೂ ಶ್ರೀಕೃಷ್ಣ ಟ್ರೋಪಿ ನೀಡಲಾಗುವುದು. ಮೊಸರುಕುಡಿಗೆ ಅಡ್ಡಕಂಬ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ರೂ.1000 ನಗದು ಹಾಗೂ ಟ್ರೋಪಿ ನೀಡಲಾಗುವುದು. ಕಾರ್ಯಕ್ರಮದಲ್ಲಿ ವಿಶೇಷ ಆಕರ್ಷಣೆಯಾಗಿ ಮಕ್ಕಳಿಗೆ ಶ್ರೀಕೃಷ್ಣ ವೇಷ ಸ್ಪರ್ಧೆ ನಡೆಯಲಿದೆ. ಮಹಿಳೆಯರಿಗೆ ಹೂಮಾಲೆ ಕಟ್ಟುವ ಸ್ಪರ್ಧೆ ನಡೆಯಲಿದೆ.
ಸಂಜೆ ನಡೆಯುವ ಸಭಾ ಕಾರ್ಯಕ್ರಮವನ್ನು ಕುದ್ರೋಳಿ ಶ್ರೀಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್ ಉದ್ಘಾಟಿಸಲಿದ್ದಾರೆ. ಪುತ್ತೂರು ತಾಲೂಕು ಯಾದವ ಸಭಾದ ಅಧ್ಯಕ್ಷ ಶ್ರೀಪ್ರಸಾದ್ ಪಾಣಾಜೆ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಅಶೋಕ್ ಕುಮಾರ್ ರೈ ಬಹುಮಾನ ವಿತರಿಸಲಿದ್ದಾರೆ. ಮಾಜಿ ಶಾಸಕ ಸಂಜೀವ ಮಠಂದೂರು, ರಾಮಕೃಷ್ಣ ಪ್ರೌಢಶಾಲಾ ಸಂಚಾಲಕ ಕಾವು ಹೇಮನಾಥ ಶೆಟ್ಟಿ, ಹಿಂದು ಮುಖಂಡ ಅರುಣ್ ಕುಮಾರ್ ಪುತ್ತಿಲ, ಪ್ರಗತಿಪರ ಕೃಷಿಕ ಲಕ್ಷ್ಮೀನಾರಾಯಣ ರೈ ಕೆದಂಬಾಡಿ, ಯಾದವ ಸಭಾ ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷ ಎ.ಕೆ ಮಣಿಯಾಣಿ ಹಾಗೂ ಪಾಣಾಜೆ ಗ್ರಾ.ಪಂ ಉಪಾಧ್ಯಕ್ಷೆ ಜಯಶ್ರೀ ದೇವಸ್ಯ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸಂಗೀತ ರಾಜರತ್ನ ರಾಜ್ಯಪ್ರಶಸ್ತಿ ಪುರಸ್ಕೃತ ಪ್ರವೀಣ್ ಜಯ ವಿಟ್ಲ ಸಾರಥ್ಯದ ನ್ಯೂ ಶೈನ್ ಮ್ಯೂಸಿಕಲ್ ವಿಟ್ಲ ತಂಡವದರಿಂದ ಗಾನ-ನಾಟ್ಯ-ಸಂಭ್ರಮ ನಡೆಯಲಿದೆ ಎಂದು ಯಾದವ ಸಭಾ ಸಮಿತಿ ಪ್ರಕಟಣೆ ತಿಳಿಸಿದೆ.