ಸತತ 25 ಗಂಟೆ ವ್ಯಕ್ತಿತ್ವ ವಿಕಸನ ತರಬೇತಿ-ಪ್ರದೀಪ್‌ ಬಾಕಿಲ ಹಾಗೂ ತಂಡದಿಂದ ಇಂಡಿಯಾ ಬುಕ್ ಆಫ್ ರೆಕಾರ್ಡ್

0

ನೆಲ್ಯಾಡಿ: ಡಾ| ಶಿವರಾಮ ಕಾರಂತ ಪ್ರತಿಷ್ಠಾನ ಹಾಗೂ ಜೆಸಿಐ ಕಲ್ಯಾಣಪುರ ಇದರ ಆಶ್ರಯದಲ್ಲಿ ನಡೆದ ತರಬೇತಿ ಕಾರ್ಯಕ್ರಮದಲ್ಲಿ ಜೇಸಿಐ ವಲಯ ತರಬೇತಿ ವಿಭಾಗದ ನಿರ್ದೇಶಕ ಪ್ರದೀಪ್ ಬಾಕಿಲರವರು ತಮ್ಮ ತಂಡದೊಂದಿಗೆ ಸತತ 25 ಗಂಟೆಗಳ ಕಾಲ ವ್ಯಕ್ತಿತ್ವ ವಿಕಸನದ ಬಗ್ಗೆ ತರಬೇತಿ ನೀಡುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್‌ಗೆ ಭಾಜನರಾಗಿದ್ದಾರೆ.


ಪ್ರದೀಪ್ ಬಾಕಿಲ ಅವರು ಜೇಸಿಐ ಆಲಂಕಾರು ಇದರ ಪೂರ್ವಾಧ್ಯಕ್ಷರಾಗಿದ್ದು ಗೋಳಿತ್ತಟ್ಟು ಶಾಂತಿನಗರ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ಪ್ರಭಾರ ಮುಖ್ಯಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವೃತ್ತಿಯಲ್ಲಿ ಶಿಕ್ಷಕರಾಗಿ, ಪ್ರವೃತ್ತಿಯಲ್ಲಿ ತರಬೇತುದಾರರಾಗಿರುವ ಇವರು ತಾವು ಸೇವೆ ಸಲ್ಲಿಸುತ್ತಿರುವ ಶಾಂತಿನಗರ ಸರಕಾರಿ ಶಾಲೆಯಲ್ಲಿ ಹಲವು ವಿನೂತನ ಕಾರ್ಯಕ್ರಮಗಳ ಮೂಲಕ ಶಿಕ್ಷಣ ನೀಡುತ್ತಿದ್ದಾರೆ. ರಾಜ್ಯದಾದ್ಯಂತ ಸುಮಾರು 200ಕ್ಕಿಂತಲೂ ಹೆಚ್ಚು ತರಬೇತಿಗಳನ್ನೂ ನೀಡಿದ್ದಾರೆ.

LEAVE A REPLY

Please enter your comment!
Please enter your name here