ಕುಂಬ್ರದಲ್ಲಿ ಸರಣಿ ಕಳ್ಳತನ

0

ಪುತ್ತೂರು:ಸೆ.4ರ ತಡ ರಾತ್ರಿ ಕುಂಬ್ರದಲ್ಲಿ ಸರಣಿ ಕಳ್ಳತನ ನಡೆದಿದೆ.ಒಳಮೊಗ್ರು ಗ್ರಾ.ಪಂ ಕಚೇರಿ, ಗ್ರಾಮ ಆಡಳಿತಾಧಿಕಾರಿ ಕಚೇರಿ, ಕರ್ನಾಟಕ ಪಬ್ಲಿಕ್ ಸ್ಕೂಲ್ ಗೆ ಕಳ್ಳರು ಬಾಗಿಲು ಒಡೆದು ಒಳ ನುಗ್ಗಿದ್ದಾರೆ.ಗ್ರಾ.ಪಂ ಕಚೇರಿಯಲ್ಲಿದ್ದ ಸಿಸಿ ಕ್ಯಾಮರಾದ ಡಿವಿಆರ್ ಕದ್ದೊಯ್ದಿದ್ದಾರೆ.ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಶ್ವಾನದಳ ಹಾಗೂ ಬೆರಳಚ್ಚು ತಜ್ಞರಾದ ಸಚಿನ್ ಮತ್ತು ತಂಡ ಭೇಟಿ, ಪರಿಶೀಲನೆ ನಡೆಸಿದ್ದಾರೆ.ಸಂಪ್ಯ ಠಾಣಾ ಎಸ್ಸೈ ಧನಂಜಯ ಮತ್ತು ಸಿಬ್ಬಂದಿಗಳಿಂದ ಪರಿಶೀಲನೆ ನಡೆಸುತ್ತಿದ್ದು ಸರಿಯಾದ ಮಾಹಿತಿ ಲಭ್ಯವಾಗಬೇಕಿದೆ.ಘಟನೆ ತಿಳಿಯುತ್ತಿದ್ದಂತೆ ನೂರಾರು ಮಂದಿ ಸಾರ್ವಜನಿಕರು ಸ್ಥಳದಲ್ಲಿ ಜಮಾಯಿಸಿದ್ದರು.

LEAVE A REPLY

Please enter your comment!
Please enter your name here