ಪುಣಚ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ವಿಟ್ಲ ಇವರ ಜಂಟಿ ಆಶ್ರಯದಲ್ಲಿ ಪೋಷಣ್ ಅಭಿಯಾನ ದಿನಾಚರಣೆ ಮತ್ತು ಗ್ರಾಮ ಆರೋಗ್ಯ ಚಿಕಿತ್ಸಾ ಕಾರ್ಯಕ್ರಮ ಪುಣಚ ಸರವು ಅಂಗನವಾಡಿ ಕೇಂದ್ರದಲ್ಲಿ ಸೆ.5ರಂದು ನಡೆಯಿತು.
ಪುಣಚ ಗ್ರಾ.ಪಂ.ಅಧ್ಯಕ್ಷೆ ಬೇಬಿ ಪಟ್ಟಿಕಲ್ಲು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಶುಭ ಹಾರೈಸಿದರು. ಪುಣಚ ಗ್ರಾ.ಪಂ.ಸದಸ್ಯೆ ಶಾರದಾ, ವಿಟ್ಲ ಶಿಶು ಅಭಿವೃದ್ದಿ ಯೋಜನಾ ಇಲಾಖೆ ಮೇಲ್ವಿಚಾರಕಿ ಸೋಮಕ್ಕ, ಆರೋಗ್ಯ ಇಲಾಖೆ ಅಧಿಕಾರಿ ವರ್ಗ, ಬಾಲ ವಿಕಾಸ ಸಮಿತಿ ಸದಸ್ಯರು, ಶ್ರೀ ಶಕ್ತಿ ಯೋಜನಾ ಸದಸ್ಯರು ಉಪಸ್ಥಿತರಿದ್ದರು.
ಗ್ರಾಮದ ಅನೇಕ ಮಂದಿ ಫಲಾನುಭವಿಗಳು ಆರೋಗ್ಯ ಚಿಕಿತ್ಸಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಅಂಗನವಾಡಿ ಶಿಕ್ಷಕಿ ಹೇಮಮಾಲಿನಿ ಕಾರ್ಯಕ್ರಮ ನಿರೂಪಿಸಿದರು.