ಪುತ್ತೂರು: ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು. ಅಧ್ಯಕ್ಷತೆ ವಹಿಸಿದ ಶಾಲಾ ಸಂಚಾಲಕ ಫಾ| ಲಾರೆನ್ಸ್ ಮಸ್ಕರೇನ್ಹಸ್ ಮಾತನಾಡಿ ತಮಗೆ ವಿದ್ಯೆಯನ್ನು ಕಲಿಸಿದ ಗುರುಗಳನ್ನು ಸ್ಮರಿಸಿ ನಾವು ನಮ್ಮ ಶಿಕ್ಷಕರನ್ನು ಗೌರವಿಸಬೇಕು. ಶಿಕ್ಷಕರು ದೇವರಿಗೆ ಸಮಾನ. ವಿದ್ಯಾರ್ಥಿನಿಯರಿಗೆ ಶಾಲೆಯಲ್ಲಿ ಶಿಕ್ಷಕರು ತಂದೆ ತಾಯಿಯ ಪಾತ್ರವನ್ನು ವಹಿಸುತ್ತಾರೆ ಎಂದು ಸಂದೇಶವಿತ್ತರು.
ಸಂತ ಫಿಲೋಮಿನಾ ಕಾಲೇಜಿನ ಕ್ಯಾಂಪಸ್ ನಿರ್ದೇಶಕ ಹಾಗೂ ಫಿಲೋಮಿನಾ ಕಾಲೇಜಿನ ಆಂಗ್ಲ ಉಪನ್ಯಾಸಕ ಸ್ಟ್ಯಾನಿ ಪಿಂಟೊ ಮಾತನಾಡಿ, ತಮಗೆ ವಿದ್ಯಾದಾನವನ್ನು ನೀಡಿದ ಶಿಕ್ಷಕರನ್ನು ನೆನೆದು ಶಿಕ್ಷಕರು ವಿದ್ಯಾರ್ಥಿನಿಯರಿಗಾಗಿ ಅನೇಕ ತ್ಯಾಗಗಳನ್ನು ಮಾಡುತ್ತಾರೆ. ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರು ಮಹತ್ತರ ಪಾತ್ರವನ್ನು ವಹಿಸುತ್ತಾರೆ ಎಂದು ತಿಳಿಸಿದರು. ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷೆ ಉದಯ ಕುಮಾರಿ ಮಾತನಾಡಿ, ಶಾಲೆಯ ಎಲ್ಲಾ ಶಿಕ್ಷಕರಿಗೆ ಶಿಕ್ಷಕರ ದಿನಾಚರಣೆಯ ಶುಭಾಶಯ ತಿಳಿಸಿ ಶಿಕ್ಷಕ ವೃತ್ತಿ ಅತ್ಯಂತ ಮಹತ್ವಪೂರ್ಣವಾದದ್ದು, ನವ ಸಮಾಜ ನಿರ್ಮಾಣದಲ್ಲಿ ಅವರ ಪಾತ್ರ ಮಹತ್ತರವಾದದ್ದು ಎಂದು ತಿಳಿಸಿದರು. ಶಾಲಾ ಮುಖ್ಯ ಶಿಕ್ಷಕಿ ರೋಸಲಿನ್ ಲೋಬೊರವರು ಪ್ರಾಸ್ತಾವಿಕ ಮಾತನಾಡಿ ಶ್ರದ್ಧೆ, ಶಿಸ್ತು, ಕಠಿಣ ಪರಿಶ್ರಮದಿಂದ ಉತ್ತಮ ಫಲಿತಾಂಶ ಎನ್ನುವ ಗುರುದಕ್ಷಿಣೆಯನ್ನು ಕೊಡಬೇಕಾಗಿ ವಿದ್ಯಾರ್ಥಿನಿಯರಿಗೆ ತಿಳಿಸಿದರು.
ವೇದಿಕೆಯಲ್ಲಿ ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಶಾಲಾ ನಾಯಕಿ ಫಾತಿಮಾ ಖಾಸಿಂ ಸ್ವಾಗತಿಸಿ, ಉಪನಾಯಕಿ ಆಶಿಕಾ ವಂದಿಸಿದರು. ಸಭಾ ಕಾರ್ಯಕ್ರಮವನ್ನು ರಫ ಮತ್ತು ಹಿದ ಹಾಗೂ ಸಾಂಸ್ಕೃತಿಕ ಕರ್ಯಕ್ರಮವನ್ನು ಫಾತಿಮಾ ಖಾಸಿಂ ಹಾಗೂ ಸನುಫಾ ನಿರೂಪಿಸಿದರು. ಶಾಲಾ ಸಂಸತ್ತಿನ ವಿದ್ಯಾರ್ಥಿನಿಯರು ಕಾರ್ಯಕ್ರಮ ನಡೆಸಿಕೊಟ್ಟರು.