ರಾಮಕುಂಜ: ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಸೆ.6ರಂದು ಆಚರಿಸಲಾಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈಯವರು ಮಾತನಾಡಿ, ಶ್ರೀಕೃಷ್ಣನ ಜೀವನ ಮೌಲ್ಯಗಳನ್ನು ಮಕ್ಕಳೆಲ್ಲರೂ ಬೆಳೆಸಿಕೊಳ್ಳಬೇಕೆಂದು ಹೇಳಿದರು. ಅತಿಥಿಯಾಗಿದ್ದ ಸಂಸ್ಥೆಯ ಪ್ರಥಮ ಮುಖ್ಯೋಪಾಧ್ಯಾಯಿನಿ, ಪ್ರಸ್ತುತ ವಿಟ್ಲ ಕೋಡಪದವು ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ಸಹಶಿಕ್ಷಕಿಯಾಗಿರುವ ಆರತಿದಾಸಪ್ಪರವರು ಮಾತನಾಡಿ, ಶ್ರೀ ಕೃಷ್ಣನ ಬಾಲ್ಯದ ಲೀಲೆಗಳನ್ನು ಹೇಳಿ, ವಿದ್ಯಾರ್ಥಿಗಳೆಲ್ಲರೂ ಬೆಳೆಸಿಕೊಳ್ಳಬೇಕಾದ ನೈತಿಕ ಮೌಲ್ಯಗಳ ಬಗ್ಗೆ ತಿಳಿಸಿದರು. ನಿವೃತ್ತ ಸೈನಿಕ ದಾಸಪ್ಪರವರು ಅಗ್ನಿಪಥದ ಕುರಿತಾಗಿ ಮಾತನಾಡಿದರು. ಸಂಸ್ಥೆಯ ಆಡಳಿತಾಧಿಕಾರಿ ಆನಂದ ಎಸ್.ಟಿ.ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಗಾಯತ್ರಿ ಯು.ಎನ್ ಸ್ವಾಗತಿಸಿ, ಸಹಶಿಕ್ಷಕರಾದ ಕವಿತಾ ಬಿ, ಸೌಮ್ಯ ಹಾಗೂ ರಾಧಾಕೃಷ್ಣ ಬಿ., ಕಾರ್ಯಕ್ರಮ ನಿರೂಪಿಸಿದರು. ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಲೋಹಿತ ಎ.ವಂದಿಸಿದರು. ಸಂಸ್ಥೆಯ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕ-ಶಿಕ್ಷಕೇತರ ವೃಂದದವರಿಗೆ ಮೊಸರು ಕುಡಿಕೆ, ಕೃಷ್ಣನ ಕುರಿತಾದ ಭಕ್ತಿಗೀತೆ ಸ್ಪರ್ಧೆ, ಕೃಷ್ಣವೇಷ ಸ್ಪರ್ಧೆ, ಕರಕುಶಲ(ಮೂಡೆ, ಗುಂಡ, ಕೊಟ್ಟಿಗೆ) ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನವನ್ನು ವಿತರಿಸಲಾಯಿತು. ಮಧ್ಯಾಹ್ನ ಅಷ್ಟಮಿಯ ವಿಶೇಷ ತಿಂಡಿಯಾದ ಕೊಟ್ಟಿಗೆ, ಮೊಳಕೆ ಬರಿಸಿದ ಹೆಸರುಕಾಳು ಸಾರು ಮತ್ತು ಪಾಯಸವನ್ನು ಉಣಬಡಿಸಲಾಯಿತು.