ರಾಮಕುಂಜ ಆ.ಮಾ.ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸರ್ವಪಲ್ಲಿ ರಾಧಾಕೃಷ್ಣನ್‌ರವರ ಜನ್ಮ ದಿನವಾದ ಸೆ..5ರಂದು ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.


ಸಂಸ್ಥೆಯ ಕಾರ‍್ಯದರ್ಶಿ ಕೆ.ಸೇಸಪ್ಪ ರೈಯವರು ದೀಪ ಬೆಳಗಿಸಿ ಸರ್ವಪಲ್ಲಿ ರಾಧಾಕೃಷ್ಣನ್‌ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ವಿದ್ಯಾರ್ಥಿಗಳ ಮತ್ತು ಶಿಕ್ಷಕರ ಬಾಂಧವ್ಯದ ಕುರಿತು ತಿಳಿಸಿದರು. ತಾಂತ್ರಿಕ ಸಲಹೆಗಾರ ಜಯೇಂದ್ರ ಬಿ.ರವರು ಶಿಕ್ಷಕರ ದಿನಾಚರಣೆಯ ಮಹತ್ವದ ಬಗ್ಗೆ ಮಾತನಾಡಿದರು. ಹತ್ತನೇ ತರಗತಿ ವಿದ್ಯಾರ್ಥಿಗಳಾದ ಚೇತನ್ ರಾಜ್ ಹಾಗೂ ಅತಿಥಿ ಶೆಟ್ಟಿ ಶಿಕ್ಷಕರ ದಿನಾಚರಣೆಯ ಕುರಿತು ಮಾತನಾಡಿದರು. ವೇದಿಕೆಯಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ಆನಂದ ಎಸ್ ಟಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಗಾಯತ್ರಿ ಯು.ಎನ್, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಲೋಹಿತ ಎ, ವ್ಯವಸ್ಥಾಪಕ ರಮೇಶ್ ರೈ ಆರ್.ಬಿ., ಶಿಕ್ಷಕ-ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು. ಹತ್ತನೇ ತರಗತಿ ವಿದ್ಯಾರ್ಥಿನಿಯರಾದ ಯಶಸ್ವಿನಿ ಜೆ.ಬಿ ಹಾಗೂ ಹಿತಾಶ್ರೀ ಪಿ.ಎನ್ ಕಾರ್ಯಕ್ರಮ ನಿರೂಪಿಸಿದರು. ಮನಸ್ವಿನಿ ಎಂ.ಆಚಾರ್ಯ ಸ್ವಾಗತಿಸಿ, ಚೈತನ್ಯ ವೆಂಕಟರಾಮ ವಂದಿಸಿದರು.
ಸಂಸ್ಥೆಯ ಶಿಕ್ಷಕ-ಶಿಕ್ಷಕೇತರ ವೃಂದದವರಿಗೆ ವಿದ್ಯಾರ್ಥಿಗಳು ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನವನ್ನು ವಿತರಿಸಿದರು. ಕಾರ್ಯಕ್ರಮದ ಕೊನೆಗೆ ಎಲ್ಲರಿಗೂ ಸಿಹಿತಿಂಡಿ ಹಂಚಲಾಯಿತು.

LEAVE A REPLY

Please enter your comment!
Please enter your name here