ನೆಲ್ಯಾಡಿ ಬೆಥನಿ ಐಟಿಐಯಲ್ಲಿ ಪ್ರವೇಶಾತಿಗೆ ಅರ್ಜಿ ಆಹ್ವಾನ

0

ನೆಲ್ಯಾಡಿ: ಬೆಥನಿ ಕೈಗಾರಿಕಾ ತರಬೇತಿ ಸಂಸ್ಥೆ (ITI) ನೆಲ್ಯಾಡಿ ಇಲ್ಲಿ 2023ನೇ ಸಾಲಿನ ಖಾಲಿ ಉಳಿದಿರುವ ಸ್ಥಾನಗಳಿಗೆ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಅಸಿಸ್ಟಂಟ್, ವೆಲ್ಡರ್, ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ ಹಾಗೂ ಫಿಟ್ಟರ್ ವಿಭಾಗದಲ್ಲಿ ಖಾಲಿಯಿರುವ ಸ್ಥಾನಗಳಿಗೆ ಎಸ್.ಎಸ್.ಎಲ್.ಸಿ, ಉತ್ತೀರ್ಣ, ಅನುತ್ತೀರ್ಣ ಹಾಗೂ ಮೇಲ್ಪಟ್ಟು ವಿದ್ಯಾರ್ಹತೆಯಿರುವ ಅಭ್ಯರ್ಥಿಗಳು ಮೂಲ ದಾಖಲೆಗಳೊಂದಿಗೆ ಸೆ.23ರ ಮೊದಲು ಅರ್ಜಿ ಸಲ್ಲಿಸಬಹುದಾಗಿದೆ. ಟೊಯೋಟಾ ಕಿರ್ಲೋಸ್ಕರ್,Bosch, L&T ಮುಂತಾದ ಕಂಪೆನಿಗಳ ಕ್ಯಾಂಪಸ್ ಸಂದರ್ಶನಗಳಿಗೆ ಮುಕ್ತ ಅವಕಾಶಗಳನ್ನು ಕಲ್ಪಿಸಿಕೊಡಲ್ಪಡುವ ಈ ತರಬೇತಿಯ ಪ್ರವೇಶಾತಿಗೆ ಬೇಕಾಗಿರುವ ಹೆಚ್ಚಿನ ಮಾಹಿತಿಗಾಗಿ ಮೊ: 9448824153, 8951400822 ಸಂಪರ್ಕಿಸುವಂತೆ ಸಂಸ್ಥೆಯ ಪ್ರಾಚಾರ್ಯರು ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here