ಇಚ್ಲಂಪಾಡಿ: ಕಾರುಗಳ ಮುಖಾಮುಖಿ ಡಿಕ್ಕಿ: ಇಬ್ಬರಿಗೆ ಗಾಯ

0

ನೆಲ್ಯಾಡಿ: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಗಾಯಗೊಂಡಿರುವ ಘಟನೆ ಪೆರಿಯಶಾಂತಿ-ಇಚ್ಲಂಪಾಡಿ ರಸ್ತೆಯ ನಡುಮನೆ ಎಂಬಲ್ಲಿ ಸೆ.6ರಂದು ಮಧ್ಯಾಹ್ನ ನಡೆದಿದೆ.


ಬೆಂಗಳೂರು ನಿವಾಸಿಗಳು ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕಾರು ಹಾಗೂ ಶಿವಮೊಗ್ಗ ನಿವಾಸಿಗಳು ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಕಾರಿನ ನಡುವೆ ಇಚ್ಲಂಪಾಡಿ ಗ್ರಾಮದ ನಡುಮನೆಯಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಪ್ರಯಾಣಿಕರು ಗಾಯಗೊಂಡಿರುವುದಾಗಿ ವರದಿಯಾಗಿದೆ. ಘಟನೆಯಿಂದಾಗಿ ಕೆಲಹೊತ್ತು ವಾಹನ ಸಂಚಾರಕ್ಕೂ ಅಡಚಣೆ ಉಂಟಾಗಿತ್ತು. ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆ ಹೆಡ್‌ಕಾನ್‌ಸ್ಟೇಬಲ್ ಕುಶಾಲಪ್ಪ ನಾಯ್ಕ, ಕಾನ್‌ಸ್ಟೇಬಲ್ ಪ್ರತಾಪ್‌ರವರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

LEAVE A REPLY

Please enter your comment!
Please enter your name here