ಸೆ.10: ಬನ್ನೂರು ಶ್ರೀ ಶಿವಪಾರ್ವತಿ ಮಂದಿರದಲ್ಲಿ ಮೊಸರು ಕುಡಿಕೆ ಉತ್ಸವ

0

ಪುತ್ತೂರು: ಶ್ರೀ ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಬನ್ನೂರು ಆಯೋಧ್ಯಾನಗರ ಶ್ರೀ ಶಿವಪಾರ್ವತಿ ಮಂದಿರದ ವಠಾರದಲ್ಲಿ 41ನೇ ವರ್ಷದ ಮೊಸರು ಕುಡಿಕೆ ಉತ್ಸವ ಸೆ.10ರಂದು ನಡೆಯಲಿದೆ.


ಬೆಳಿಗ್ಗೆ ಉದ್ಘಾಟನಾ ಕಾರ್ಯಕ್ರಮವನ್ನು ಎನ್.ಸಂಜೀವ ನಾಯ್ಕ ಅವರು ನೆರವೇರಿಸಿ ವಿವಿಧ ಆಟೋಟ ಸ್ಪರ್ಧೆಗಳಿಗೆ ಚಾಲನೆ ನೀಡಲಿದ್ದಾರೆ. ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಮೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ರಾಮಚಂದ್ರ ಎಂ ಅವರು ಧಾರ್ಮಿಕ ಭಾಷಣ ಮಾಡಲಿದ್ದಾರೆ. ಮಂದಿರದ ಗೌರವಾಧ್ಯಕ್ಷ ಉದಯ ಕುಮಾರ್ ಹಾರಾಡಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಮಂದಿರದ ಅಧ್ಯಕ್ಷ ವಿಶ್ವನಾಥ ಗೌಡ ಬನ್ನೂರು ಅಧ್ಯಕ್ಷತೆ ವಹಿಸಲಿದ್ದಾರೆ. ಇದೇ ಸಂದಭದಲ್ಲಿ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ. ಸಭಾ ಕಾರ್ಯಕ್ರಮದ ಬಳಿಕ ಮಂದಿರದಲ್ಲಿ ವಿಶೇಷ ಭಜನಾ ಕಾರ್ಯಕ್ರಮ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here