ಕೊಂಬೆಟ್ಟು ಶಾಲೆಯಲ್ಲಿ ಶಿಕ್ಷಕರಿಗೆ ಗುರುವಂದನ ಕಾರ್ಯಕ್ರಮ

0

ಪುತ್ತೂರು: ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಇಲಾಖೆ, ಕೊಂಬೆಟ್ಟು ಸರಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ವತಿಯಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ಶಿಕ್ಷಕ ವೃಂದದವರಿಗೆ ಗುರುವಂದನ ಕಾರ್ಯಕ್ರಮವು ಸೆ.7ರಂದು ಸಂಸ್ಥೆಯಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಪಪ್ರಾಂಶುಪಾಲ ವಸಂತ ಮೂಲ್ಯ ವಹಿಸಿ ಮಾತನಾಡಿ ಗುರುಗಳಿಗೆ, ಹಿರಿಯರಿಗೆ ಗೌರವ ಕೊಡುವುದನ್ನು ವಿದ್ಯಾರ್ಥಿ ಜೀವನದಲ್ಲೇ ಕಲಿತಾಗ ಮುಂದಿನ ನಿಮ್ಮ ಜೀವನವು ಯಶಸ್ವಿಯಾಗಿ ಸಾಗುತ್ತದೆ ಇದನ್ನು ರೂಢಿಸಿಕೊಳ್ಳಿ ಎಂದು ಕರೆ ನೀಡಿದರು. ಎಸ್‌ಡಿಎಂಸಿ ಕಾರ್ಯಾಧ್ಯಕ್ಷ ಜೋಕಿಂ ಡಿಸೋಜ ಮಾತನಾಡಿ ಎಸ್‌ಡಿಎಂಸಿ ವತಿಯಿಂದ ಶಿಕ್ಷಕರಿಗೆ ಪ್ರಪ್ರಥಮ ಬಾರಿಗೆ ಇಂಥದೊಂದು ಗುರುವಂದನ ಕಾರ್ಯಕ್ರಮ ಆಯೋಜಿಸಿದ್ದೇವೆ. ಶಿಕ್ಷಕರನ್ನು ಗೌರವಿಸುತ್ತಿರುವುದು ನಮ್ಮೆಲ್ಲರ ಪುಣ್ಯದ ಕೆಲಸ. ಇದು ನಮಗೆ ಒದಗಿ ಬಂದ ಸೌಭಾಗ್ಯ. ಗುರುಗಳು ದೇವರಿಗೆ ಸಮಾನ ಅವರನ್ನು ಈ ಸಂದರ್ಭದಲ್ಲಿ ಗೌರವಿಸಿ ಸನ್ಮಾನಿಸಿದ್ದು ಸಂತಸ ತಂದಿದೆ ಎಂದು ಹೇಳಿದರು.

ಎಸ್‌ಡಿಎಂಸಿ ಸದಸ್ಯರಾದ ಸುರೇಶ್ ರೈ ಪಡ್ಡಂಬೈಲು, ಜಯಪ್ರಕಾಶ್, ಚನ್ನಪ್ಪ, ಸವಿತಾ ದೇವಿ, ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರಾದ ಸೇರ ಕೋಟಿಯಪ್ಪ ಪೂಜಾರಿ, ಶಿಕ್ಷಕ ವೃಂದದವರು ಈ ಸಂದರ್ಭದಲ್ಲಿ ಹಾಜರಿದ್ದರು. ಶಿಕ್ಷಕರಿಗೆ ಶಾಲು ಫಲಪುಷ್ಪ ನೀಡಿ ಗುರುವಂದನೆ ನಡೆಯಿತು. ನಂತರ ಶಿಕ್ಷಕರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ವಿದ್ಯಾರ್ಥಿಗಳು ನಡೆಸಿಕೊಟ್ಟರು. ಎಸ್‌ಡಿಎಂಸಿ ವತಿಯಿಂದ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಿಸಲಾಯಿತು. ವಿದ್ಯಾರ್ಥಿಗಳಾದ ಶ್ರೀಕೃಪಾ ಪ್ರಾರ್ಥಿಸಿದರು. ಶಿಲ್ಪ ಸ್ವಾಗತಿಸಿ, ಸುಶ್ಮಿತ ವಂದಿಸಿ, ಪ್ರಣಮ್ಯ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here