ಕಾಣಿಯೂರು : ಶಾಲಾ ಎಸ್‍ಡಿಎಂಸಿ ಹಾಗೂ ಪೋಷಕ ವೃಂದ ಮತ್ತು ಊರಿನವರ ಸಹಕಾರದೊಂದಿಗೆ ಪ್ರಥಮ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಕೊಪ್ಪ ಶಾಲಾ ವಠಾರದಲ್ಲಿ ಸೆ 6 ರಂದು ವಿಜೃಂಭಣೆಯಿಂದ ಗಣ್ಯ ಅತಿಥಿಗಳ ಸಮ್ಮುಖದಲ್ಲಿ ಶ್ರೀ ಕೃಷ್ಣ ರಾಧಾ ವೇಷ ದಾರಿಗಳನ್ನು ತೀರ್ಥ ಕೇರಿಯಿಂದ ಕೊಪ್ಪ ಶಾಲಾ ವಠಾರಕ್ಕೆ ಚೆಂಡೆ ವಾದನಗಳೊಂದಿಗೆ ಅದ್ದೂರಿ ಮೆರವಣಿಗೆಯೊಂದಿಗೆ ಕರೆ ತರಲಾಯಿತು.
ಬೆಳಿಗ್ಗೆ ಪ್ರಥಮ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಮಂಗಳೂರು ವಿಶ್ವವಿದ್ಯಾನಿಲಯ ಸಿಂಡಿಕೇಟ್ ಮಾಜಿ ಸದಸ್ಯ ವಿಜಯ್ ಕುಮಾರ್ ಸೊರಕೆ ಉದ್ಘಾಟಿಸಿದರು. ಉದ್ಘಾಟಿಸಿ ಮಾತನಾಡಿ, ಶ್ರೀ ಕೃಷ್ಣ ಜನ್ಮಾಷ್ಟಮಿ ಯ ಮಹತ್ವವನ್ನು ತಿಳಿಸಿದರು.ಅಲ್ಲದೇ ಶಾಲೆಯ ಅಭಿವೃದ್ಧಿಯಲ್ಲಿ ಸಹಕರಿಸುತ್ತೇನೆ ಎಂದವರು, ಈ ಕಾರ್ಯಕ್ರಮಕ್ಕೆ ದೇಣಿಗೆಯಾಗಿ ರೂಪಾಯಿ 5 ಸಾವಿರವನ್ನು ಮುಖ್ಯ ಗುರುಗಳಾದ ನಾರಾಯಣ ಡಿ ಪುಣಚ ಇವರಿಗೆ ಹಸ್ತಾಂತರಿಸಿದರು .ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷ ಸೀತಾರಾಮ ಕೆ ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ಕಾಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷ ವಿಶ್ವನಾಥ ಕೊಪ್ಪ, ಮಾಜಿ ಎಸ್ ಡಿ ಎಂ ಸಿ ಅಧ್ಯಕ್ಷ ಮೋನಪ್ಪ ಗೌಡ ಉಳವ, ಸಿ ಆರ್ ಪಿ ಯಶೋಧ, ಮಾಜಿ ಎಸ್ ಡಿ ಎಂ ಸಿ ಅಧ್ಯಕ್ಷ ಜನಾರ್ದನ ಗೌಡ ಕೆಳಗಿನ ಕೇರಿ, ಮಾಜಿ ಉಪಾಧ್ಯಕ್ಷ ನಾಗೇಶ್ ಉಪಸ್ಥಿತರಿದ್ದರು. ಕಾರ್ಯಕ್ರಮದ ಬಗ್ಗೆ ಮುಖ್ಯಗುರುಗಳಾದ ನಾರಾಯಣ ಡಿ ಪುಣಚ ಇವರು ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು.
ಸನ್ಮಾನ:
ಕಾಣಿಯೂರು ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿರುವ ವಿಶ್ವನಾಥ ಕೊಪ್ಪ ರವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಶುಭಹಾರೈಸಿದರು. ಬಳಿಕ ಅಂಗನವಾಡಿ ಪುಟಾಣಿಗಳಿಗೆ ಶಾಲಾ ಮಕ್ಕಳಿಗೆ ಪೋಷಕರಿಗೆ ಹಿರಿಯ ವಿದ್ಯಾರ್ಥಿಗಳಿಗೆ ಊರಿನವರಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಲಾಯಿತು. ಸಮಾರೋಪ ಸಮಾರಂಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ನೀಡಿ ಗೌರವಿಸಲಾಯಿತು. ವಿದ್ಯಾರ್ಥಿನಿ ಹನ್ಸಿಕ ಪ್ರಾರ್ಥಿಸಿದರು. ಗೌರವ ಶಿಕ್ಷಕಿ ಕ್ಷಮ ವಂದಿಸಿದರು. ಅತಿಥಿ ಶಿಕ್ಷಕ ಸುರೇಶ್ ಕಾರ್ಯಕ್ರಮ ನಿರೂಪಿಸಿದರು.