ಕಾಣಿಯೂರು: ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕಾಣಿಯೂರು 2022-23ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷರಾದ ಆನಂದ ಗೌಡ ಮೇಲ್ಮನೆ ಇವರ ಅಧ್ಯಕ್ಷತೆಯಲ್ಲಿ ಸೆ 9ರಂದು ಬೆಳಿಗ್ಗೆ ಚಾರ್ವಾಕ ಶ್ರೀ ಕಪಿಲೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಲಿದ್ದು, ಸಂಘದ ಸದಸ್ಯರೆಲ್ಲರೂ ಕ್ಲಪ್ತ ಸಮಯಕ್ಕೆ ಬಂದು ಸಭಾ ಕಾರ್ಯಕಲಾಪಗಳಲ್ಲಿ ಭಾಗವಹಿಸಬೇಕೆಂದು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶೋಕ್ ಗೌಡರವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.