ಪ್ರಾಥಮಿಕ ಬಾಲಕರ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಕಾಣಿಯೂರು ಪ್ರಗತಿ ದ್ವಿತೀಯ ಸ್ಥಾನ

0

ಕಾಣಿಯೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ನೆಟ್ಟಣಿಗೆ ಮುಡ್ನೂರುನಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಪ್ರಾಥಮಿಕ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟದ ಪ್ರಾಥಮಿಕ ಬಾಲಕರ ವಿಭಾಗದಲ್ಲಿ ವಿಕಾಸ್, ನಿಶಾಂತ್ ಕೆ ಜಿ, ಭವಿಷ್ ಡಿ, ಚಿಂತನ್ ಡಿ, ಹರ್ಷ ಪಿ ವಿ, ಕುಮಾರ ಸುಬ್ರಹ್ಮಣ್ಯ ,ಮದನ್ ಕುಮಾರ್ ,ರೈಹಾನ್ ,ಸ್ವಸ್ತಿಕ್ ಪ್ರನ್ವಿತ್, ವರುಣ್, ಸಾಧನ್ ಎಮ್ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ವಿಕಾಸ್ (7 ನೇ) ಸರ್ವಾಂಗೀಣ ಆಟಗಾರ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ.


ಇವರನ್ನು ಶಾಲಾಡಳಿತ ಮಂಡಳಿಯ ಅಧ್ಯಕ್ಷರಾದ ಜಗನ್ನಾಥ ರೈ ನುಳಿಯಾಲು, ಶಾಲಾ ಸಂಚಾಲಕರಾದ ಜಯಸೂರ್ಯ ರೈ ಮಾದೋಡಿ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಉಮೇಶ್ ಕೆ ಎಂ ಬಿ, ಶಾಲಾ ಆಡಳಿತಾಧಿಕಾರಿ ವಸಂತ ರೈ ಕಾರ್ಕಳ , ಶಾಲಾ ಮುಖ್ಯಗುರು ಸರಸ್ವತಿ ಎಂ ಮತ್ತು ಶಿಕ್ಷಕ ವೃಂದದವರು ಅಭಿನಂದಿಸಿದರು.

LEAVE A REPLY

Please enter your comment!
Please enter your name here