ಕುಕ್ಕೆ ಸುಬ್ರಹ್ಮಣ್ಯಕ್ಕೆ ಕರ್ನಾಟಕ ಸರಕಾರ ಧಾರ್ಮಿಕ ದತ್ತಿ ಇಲಾಖೆಯ ಕಮಿಷನರ್ ಸಿ .ಎಚ್‌. ಬಸವರಾಜೇಂದ್ರ ಭೇಟಿ

0

ಸುಬ್ರಹ್ಮಣ್ಯ : ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಯ ಕಮಿಷನರ್ ಸಿ .ಎಚ್‌. ಬಸವರಾಜೇಂದ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸೆ.7 ರಂದು ಭೇಟಿ ನೀಡಿದರು.

ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಅವರನ್ನು ದೇವಸ್ಥಾನದ ವತಿಯಿಂದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನ್‌ ರಾಮ್ ಸುಳ್ಳಿ, ಕಾರ್ಯ ನಿರ್ವಹಣಾಧಿಕಾರಿ ಡಾ| ನಿಂಗಯ್ಯ, ವ್ಯವಸ್ಥಾಪನ ಸಮಿತಿ ಸದಸ್ಯರಾದ ಶೋಭಾ ಗಿರಿಧರ್, ವನಜ ವಿ.ಭಟ್, ಪ್ರಸನ್ನ ದರ್ಬೆ, ಮಾಸ್ಟರ್ ಪ್ಲಾನ್ ಸದಸ್ಯ ಮನೋಜ್, ದೇವಳದ ಶಿಷ್ಟಾಚಾರ ಅಧಿಕಾರಿ ಜಯರಾಮ್ ರಾವ್ ಮತ್ತು ಸಿಬ್ಬಂದಿ ವರ್ಗದವರು ಸ್ವಾಗತಿಸಿದರು.ಸೆ.7 ರಂದು ಬೆಳಗ್ಗೆ ಸುಬ್ರಹ್ಮಣ್ಯ ದೇವರಿಗೆ ಮಹಾಭಿಷೇಕ ನೆರವೇರಿಸಿ, ದೇವಸ್ಥಾನದ ಹೊರಾಂಗಣದಲ್ಲಿರುವ ಹೊಸಳ್ಳಿಗಮ್ಮ ದೇವಿಯ ದರ್ಶನವನ್ನು ಪಡೆದರು.

LEAVE A REPLY

Please enter your comment!
Please enter your name here