ಪುತ್ತೂರು: 7 ವರ್ಷಗಳ ಹಿಂದೆ ಗೋಳಿತೊಟ್ಟುವಿನಲ್ಲಿ ಲಾರಿ ಡಿಕ್ಕಿಯಾಗ ಪಾದಚಾರಿ ಮಹಿಳೆ ಮೃತಪಟ್ಟ ಪ್ರಕರಣದಲ್ಲಿ ಆರೋಪಿ ಲಾರಿ ಚಾಲಕನನ್ನು ಪುತ್ತೂರು ನ್ಯಾಯಾಲಯ ದೋಷಮುಕ್ತಗೊಳಿಸಿ ತೀರ್ಪು ನೀಡಿದೆ.
2016ರ ಜೂ.15ರಂದು ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ಚಾಲಕ ಹರೀಶ್ ಎಸ್ ಕೆ ಅವರು ಚಲಾಯಿಸುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ಗೋಳಿತೊಟ್ಟು ಸೇತುವೆ ಬಳಿ ಪಾದಚಾರಿ ಜಾನಕಿ ಎಂಬವರಿಗೆ ಡಿಕ್ಕಿಯಾಗಿತ್ತು. ಪರಿಣಾಮ ಜಾನಕಿ ಅವರು ತೀವ್ರ ಗಾಯಗೊಂಡು ಮೃತಪಟ್ಟಿದ್ದರು. ಘಟನೆಗೆ ಸಂಬಂಧಿಸಿ ಆರೊಪಿ ಚಾಲಕ ಹರೀಶ್ ಅವರು ಗಾಯಾಳುವನ್ನು ಆಸ್ಪತ್ರೆಗೆ ಕರೆದೊಯ್ಯಲು ಸಹಕರಿಸದೆ ಮತ್ತು ಅಪಘಾತ ಮಾಹಿತಿಯನ್ನು ಪೊಲೀಸ್ ಠಾಣೆಗೆ ತಿಳಿಸದೆ ಪರಾರಿಯಾಗಿದ್ದರು. ಈ ಕುರಿತು ಪುತ್ತೂರು ಸಂಚಾರ ಪೊಲೀಸರು ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿ ಹರೀಶ್ ಅವರನ್ನು ದೋಷಮುಕ್ತಗೊಳಿಸಿ ತೀರ್ಪು ನೀಡಿದೆ. ಆರೋಪಿ ಪರ ವಕೀಲರಾದ ಮಾದವ ಪೂಜಾರಿ, ಮೋಹಿನಿ ಕೆ, ನಿಶಾ ಕುಮಾರಿ ವಾದಿಸಿದರು.