ಪುತ್ತೂರು ತಾ|ಮಟ್ಟದ ಪ್ರೌಢಶಾಲಾ ಬಾಲಕ/ಬಾಲಕಿಯರ ಕಬಡ್ಡಿ -ಬಾಲಕರ ವಿಭಾಗದಲ್ಲಿ ರಾಮಕುಂಜ ಕ.ಮಾ.ಪ್ರೌಢಶಾಲೆ ಜಿಲ್ಲಾ ಮಟ್ಟಕ್ಕೆ

0

ರಾಮಕುಂಜ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಇದರ ಆಶ್ರಯದಲ್ಲಿ ಸೈಂಟ್ ಮೇರಿಸ್ ಪ್ರೌಢಶಾಲೆ, ಮರ್ದಾಳದಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕ ಹಾಗೂ ಬಾಲಕಿಯರ ಕಬಡ್ಡಿ ಪಂದ್ಯಾಟದ ಬಾಲಕರ ವಿಭಾಗದಲ್ಲಿ ರಾಮಕುಂಜ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.
ತಂಡದ ನಾಯಕ ಕಾರ್ತಿಕ್ ಬೆಸ್ಟ್ ರೈಡರ್ ಹಾಗೂ ಪ್ರೀತಮ್ ಬೆಸ್ಟ್ ಕ್ಯಾಚರ್ ಪ್ರಶಸ್ತಿ ಪಡೆದರು. ಸತ್ಯ, ಶ್ರೇಯಸ್, ಹಿತೇಶ್, ನಿತೇಶ್ ಗೌಡ, ಯಶವಂತ, ಮೌನೇಶ್, ದಿಲೀಪ್, ಮಹಮ್ಮದ್ ರೈಜ್, ಕೃತಿಕ್, ನಿಖಿಲ್ ಎನ್.ಡಿ, ಸಂನ್ವಿತ್ ತಂಡವನ್ನು ಪ್ರತಿನಿಧಿಸಿದ್ದರು. ತಂಡಕ್ಕೆ ಮಾಧವ ಬಿ.ಕೆ, ಜಸ್ವಂತ್ ಹಾಗೂ ಮಂಜುನಾಥ್‌ರವರು ತರಬೇತಿ ನೀಡಿದ್ದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಪ್ರಫುಲ್ಲ ರೈಯವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು. ಶಾಲಾ ಮುಖ್ಯಗುರು ಸತೀಶ್ ಭಟ್, ಶಾಲಾ ಶಿಕ್ಷಕ ವೃಂದ ಹಾಗೂ ಆಡಳಿತ ಮಂಡಳಿಯವರು ಸಹಕರಿಸಿದ್ದರು.

LEAVE A REPLY

Please enter your comment!
Please enter your name here