ಪುತ್ತೂರು: ಬಡಗನ್ನೂರು ಗ್ರಾಮದ ಕುದ್ಕಾಡಿಯಲ್ಲಿ ತಾಯಿ, ಮಗನನ್ನು ಕಟ್ಟಿ ಹಾಕಿ ದರೋಡೆ ಮಾಡಿದ ಪ್ರಕರಣವನ್ನು ಬೇದಿಸಿ ಆರೋಪಿಗಳನ್ನು ಬಂಧಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಶಾಸಕರಾದ ಅಶೋಕ್ ರೈ ಸೂಚನೆಯನ್ನು ನೀಡಿದ್ದಾರೆ.
ಒಂಟಿ ಮನೆ ಇರುವ ಕಡೆಗಳಲ್ಲಿ ಇಂಥಹ ಘಟನೆಗಳು ಹೆಚ್ಚು ನಡೆಯುತ್ತಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಮತ್ತು ದರೋಡೆ ತಂಡದವರನ್ನು ಪತ್ತೆ ಮಾಡುವ ಮೂಲಕ ಇಲಾಖೆ ಬಗ್ಗೆ ಜನರಿಗೆ ವಿಶ್ವಾಸ ಮತ್ತು ಧೈರ್ಯ ತುಂಬುವ ಕೆಲಸವನ್ನು ಪೊಲೀಸ್ ಇಲಾಖೆ ಮಾಡಬೇಕು ಎಂದು ಪಶ್ಚಿಮ ವಲಯ ಐಜಿಯವರಿಗೆ ದೂರವಾಣಿ ಮೂಲಕ ಸೂಚನೆಯನ್ನು ನೀಡಿದ್ದಾರೆ. ಗ್ರಾಮಾಂತರ ಭಾಗದಲ್ಲಿ ಇಂಥಹ ಕೃತ್ಯಗಳು ನಡೆದಾಗ ಜನ ಭಯಭೀತರಾಗುತ್ತಾರೆ. ಆರೋಪಿಗಳನ್ನು ಶೀಘ್ರದಲ್ಲೇ ಪತ್ತೆ ಮಾಡುವ ಮೂಲಕ ಕ್ರಿಮಿನಲ್ ಗಳ ಹೆಡೆಮುರಿ ಕಟ್ಟುವ ಕೆಲಸವನ್ನು ಇಲಾಖೆ ಮಾಡಬೇಕಿದ್ದು ಇದಕ್ಕೆ ಬೇಕಾದ ಪೂರ್ಣ ಸಹಕಾರವನ್ನು ನೀಡುವುದಾಗಿ ಶಾಸಕರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಅಪರಾಧ, ದರೋಡೆ, ಕಳವು ಕೃತ್ಯಗಳು ನಡೆಯದಂತೆ ಇಲಾಖೆ ಕಟ್ಟೆಚ್ಚರ ವಹಿಸಬೇಕೆಂದು ಶಾಸಕರು ಸೂಚನೆ ನೀಡಿದ್ದಾರೆ. ದೆಹಲಿ ಪ್ರವಾಸದಲ್ಲಿರುವ ಕಾರಣ ಶಾಸಕರ ದೂರವಾಣಿ ಮೂಲಕ ಪೊಲೀಸ್ ಇಲಾಖೆಯ ಅಧಿಕಾರಿಗಳ ಜೊತೆ ದೂರವಾಣಿ ಜೊತೆ ಸಂಪರ್ಕಿಸಿ ಖಡಕ್ ಸೂಚನೆಯನ್ನು ನೀಡಿದ್ದಾರೆ.