ಕೆಮ್ಮಾರ: ಸರಕಾರಿ ಉನ್ನತ ಹಿರಿಯ ಶಾಲೆ ಕೆಮ್ಮಾರ ಇಲ್ಲಿ ವಿಧ್ಯಾರ್ಥಿಗಳ ನೇತೃತ್ವದಲ್ಲಿ ಬಹಳ ವಿಜೃಂಭಣೆಯಿಂದ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು. ಶಾಲೆಯ ಮುಖ್ಯ ಶಿಕ್ಷಕಿ ಜಯಶ್ರೀ ಎಂ ರವರು ಕಾರ್ಯಕ್ರಮ ಉದ್ಘಾಟಿಸಿ ಈ ದಿನದ ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು SDMC ಅಧ್ಯಕ್ಷ ಅಝೀಝ್ ಬಿ.ಕೆ ವಹಿಸಿದ್ದರು. ವಿದ್ಯಾರ್ಥಿಗಳು ಶಿಕ್ಷಕರಿಗಾಗಿ ವಿವಿಧ ಆಟಗಳನ್ನು ಆಯೋಜಿಸಿದ್ದರು. ವೇದಿಕೆಯಲ್ಲಿ ಶಾಲಾಭಿವೃಧ್ದಿ ಸಮಿತಿ ಸದಸ್ಯರಾದ ಪದ್ಮನಾಭ ಶೆಟ್ಟಿ, ಎಲ್ಲಾ ಅಧ್ಯಾಪಕ ವೃಂದದವರು, ಅಕ್ಷರ ದಾಸೋಹ ಸಿಬ್ಬಂದಿಗಳು ಉಪಸ್ಥಿತರಿದ್ದರು. ಸ್ಪರ್ಧೆಗಳಲ್ಲಿ ವಿಜೇತರಾದ ಶಿಕ್ಷಕರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮವನ್ನು 8ನೇ ತರಗತಿ ಮಹಮ್ಮದ್ ಅನಾಸ್ ನಿರೂಪಿಸಿದರು. 7ನೇ ತರಗತಿ ಮಹಮ್ಮದ್ ಸಮ್ಮಾಸ್ ಸ್ವಾಗತಿಸಿದರು. ಕುಮಾರಿ ನಸ್ರೀನ ಧನ್ಯವಾದವಿತ್ತರು.
©