ಕಾವು:ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

0

◆ ವಿವಿಧ ಅಟೋಟ ಸ್ಪರ್ದೆ
◆ ಶ್ರೀ ಕೃಷ್ಣನ ವೇಷ ತೊಟ್ಟು ಸಂಭ್ರಮಿಸಿದ ಪುಟಾಣಿಗಳು


ಕಾವು:ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕ್ರೀಡಾಕೂಟ ಹಾಗೂ ಗೆಳೆಯರ ಬಳಗ ಕಾವು ಇವರ ಪ್ರಾಯೋಜಕತ್ವದಲ್ಲಿ ಮುದ್ದು ಕೃಷ್ಣ ಸ್ಫರ್ಧೆ ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸೆ 6 ರಂದು ನಡೆಯಿತು.


ಉದ್ಘಾಟನಾ ಕಾರ್ಯಕ್ರಮ
ಕ್ರೀಡಾಕೂಟದ ಉದ್ಘಾಟನೆಯನ್ನು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ನನ್ಯ ಅಚ್ಚುತ ಮೂಡೆತ್ತಾಯ ದೀಪ ಪ್ರಜ್ವಲಿಸಿ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.


ಸದಸ್ಯರಾದ ಬಾಲಮುರಳಿ ಸಸ್ಪೆಟ್ಟಿ ಮತ್ತು ಲಕ್ಷ್ಮಿನಾರಾಯಣ ಭಟ್ ಪೆರ್ನಾಜೆ ಹಾಗೂ ಸುಚೇತಾ ರೈ ಮತ್ತು ಗೀತಾ ಮಾಣಿಯಡ್ಕ ಚೆನ್ನಮಣೆ ಆಡುವುದರ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು.ವೇದಿಕೆಯಲ್ಲಿ ಸಮಿತಿ ಅಧ್ಯಕ್ಷ ನವೀನ್ ನನ್ಯಪಟ್ಟಾಜೆ,ಕೋಶಾಧಿಕಾರಿ ಕೃಷ್ಣ ಪ್ರಸಾದ್ ಕೊಚ್ಚಿ,ಮಾಜಿ ಅಧ್ಯಕ್ಷ ಲೋಕೇಶ್ ಚಾಕೋಟೆ ಉಪಸ್ಥಿತರಿದ್ದರು. ಸಮಿತಿ ಅಧ್ಯಕ್ಷ ನವೀನ್ ನನ್ಯಪಟ್ಟಾಜೆ ಸ್ವಾಗತಿಸಿ, ಸದಸ್ಯರಾದ ಯೋಗೀಶ್ ಕಾವು ವಂದಿಸಿದರು, ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ಕಾವು ಕಾರ್ಯಕ್ರಮ ನಿರ್ವಹಿಸಿದರು.


ಬಹುಮಾನ ವಿತರಣೆ ಕಾರ್ಯಕ್ರಮ
ಪುರುಷರಿಗೆ ,ಮಹಿಳೆಯರಿಗೆ,ಪ್ರಾಥಮಿಕ ಹಂತ, ಪ್ರೌಢ ಹಂತದ ಹುಡುಗ,ಹುಡುಗಿಯರಿಗೆ ,ಅಂಗನವಾಡಿ ಮಕ್ಕಳಿಗೆ ನಡೆದ ವಿವಿಧ ಸ್ಪರ್ಧೆಯಲ್ಲಿ ಮಧ್ಯಾಹ್ನದ ಒಳಗೆ
ನಡೆದ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು, ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹಾಗೂ ಗಣೇಶೋತ್ಸವ ಸಮಿತಿಯ ಗೌರವ ಸಲಹೆಗಾರರು ಚಂದ್ರಶೇಖರ ರಾವ್ ನಿಧಿಮುಂಡ,ಸಮಿತಿ ಗೌರವಾಧ್ಯಕ್ಷ ನನ್ಯ ಅಚ್ಚುತ ಮೂಡಿತ್ತಾಯ, ಅಧ್ಯಕ್ಷ ನವೀನ್ ನನ್ಯ ಪಟ್ಟಾಜೆ, ಮಾಜಿ ಅಧ್ಯಕ್ಷರಾದ ಲೋಕೇಶ್ ಚಾಕೋಟೆ ವಿಜೇತರಿಗೆ ಬಹುಮಾನ ವಿತರಿಸಿದರು, ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ಕಾವು ವಿಜೇತರ ಪಟ್ಟಿ ವಾಚಿಸಿದರು, ಸದಸ್ಯ ದಿವ್ಯಪ್ರಸಾದ್ ಎ ಎಂ ಕಾರ್ಯಕ್ರಮ ನಿರ್ವಹಿಸಿದರು.ಸಮಿತಿಯ ಪದಾಧಿಕಾರಿಗಳು, ಸದಸ್ಯರು ಸಹಕರಿಸಿದರು.


ಶ್ರೀ ಕೃಷ್ಣನ ವೇಷ ತೊಟ್ಟು ಸಂಭ್ರಮಿಸಿದ ಪುಟಾಣಿಗಳು
ಗೆಳೆಯರ ಬಳಗ ಕಾವು ಇವರ ಪ್ರಾಯೋಜಕತ್ವದಲ್ಲಿ ಶ್ರೀ ಕೃಷ್ಣ ವೇಷ ಸ್ಪರ್ದೆ ಕಾವು ಶ್ರೀ ಪಂಚಲಿಂಗೇಶ್ವರ ದೇವಾಲಯದ ಸಭಾಭವನದಲ್ಲಿ ನಡೆಯಿತು.3 ವರ್ಷದೊಳಗಿನ ಪುಟಾಣಿಗಳಿಗೆ ಮತ್ತು 6 ವರ್ಷದೊಳಗಿನ ಪುಟಾಣಿಗಳಿಗೆ ಈ ಸ್ಪರ್ಧೆ ಆಯೋಜಿಸಲಾಗಿತ್ತು.ಸುಮಾರು 50ಕ್ಕೂ ಅಧಿಕ ಪುಟಾಣಿಗಳು ಶ್ರೀ ಕೃಷ್ಣ ನ ವೇಷ ತೊಟ್ಟು ವೇದಿಕೆ ಹತ್ತಿ ಶ್ರೀ ಕೃಷ್ಣನ ಬಾಲಲೀಲೆಗಳನ್ನು ಆಡಿ ಸಂಭ್ರಮಿಸಿದರು. ಕಾರ್ಯಕ್ರಮವನ್ನು ಗೆಳೆಯರ ಬಳಗದ ನಾರಾಯಣ ಆಚಾರ್ಯ ಮಳಿ ನಿರ್ವಹಿಸಿದರು.

LEAVE A REPLY

Please enter your comment!
Please enter your name here