ಕಾಣಿಯೂರು- ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಸಮಾರೋಪ

0

ಕಾಣಿಯೂರು: ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ 11ನೇ ವರ್ಷದ ಮೊಸರು ಕುಡಿಕೆ ಉತ್ಸವ ಕಾಣಿಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಣಿಯೂರು ಗ್ರಾ.ಪಂ. ಅಧ್ಯಕ್ಷ ವಿಶ್ವನಾಥ ಕೊಪ್ಪ ವಹಿಸಿದ್ದರು. ಬೆಳಂದೂರು ಗ್ರಾ. ಪಂ ಉಪಾಧ್ಯಕ್ಷ ಜಯಂತ ಅಬೀರ, ಮೆಸ್ಕಾಂ ಇಲಾಖೆಯ ರಾಜೇಶ್ ಪುತ್ತೂರು, ನಿವೃತ್ತ ಸೈನಿಕ ಬಾಲಕೃಷ್ಣ ಬಸ್ತಿ ಬೆದ್ರಾಜೆ, ಕಾಣಿಯೂರು ಜಾತ್ರೋತ್ಸವ ಸಮಿತಿ ಅಧ್ಯಕ್ಷ ವಿಶ್ವನಾಥ ಓಡಬಾಯಿ, ಕಡಬ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಮಹೇಶ್ ಕೆ ಸವಣೂರು, ಕಾಣಿಯೂರು ವಿಶ್ವಜ್ಞ ಯುವಕ ಮಂಡಲದ ಗೌರವಾಧ್ಯಕ್ಷ ಜನಾರ್ದನ ಆಚಾರ್ಯ ಕಾಣಿಯೂರು, ಕಾಣಿಯೂರು ಕಣ್ವರ್ಷಿ ಮಹಿಳಾ ಮಂಡಲದ ಅಧ್ಯಕ್ಷೆ ಮಮತಾ ಲೋಕೇಶ್ ಅಗಳಿ, ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ಅಧ್ಯಕ್ಷ ರಾಜೇಶ್ ಮೀಜೆ ಉಪಸ್ಥಿತರಿದ್ದರು. ಧರ್ಮಪಾಲ ಕಲ್ಪಡ, ನಾರಾಯಣ ಓಡಬಾಯಿ, ವಿನಯ್ ಎಲುವೆ, ರಮೇಶ್ ಮಾದೋಡಿ, ಕೀರ್ತಿಕುಮಾರ್ ಎಲುವೆ ಅತಿಥಿಗಳನ್ನು ಗೌರವಿಸಿದರು.
ಯುವಕ ಮಂಡಲದ ಮಾಜಿ ಅಧ್ಯಕ್ಷ ಗಣೇಶ್ ಪೆರ್ಲೋಡಿ ಸ್ವಾಗತಿಸಿ, ಕಾರ್ಯದರ್ಶಿ ದೀಕ್ಷಿತ್ ಕಂಪ ವಂದಿಸಿದರು. ಸದಸ್ಯರಾದ ಪರಮೇಶ್ವರ ಅನಿಲ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here