ಸೆ.9: ನೆಲ್ಯಾಡಿ ವಲಯ ಬಂಟರ ಸಂಘದ ಆಶ್ರಯದಲ್ಲಿ ಸೋಣದ ಪೊರ್ಲು, ಪ್ರತಿಭಾಪುರಸ್ಕಾರ, ಸಾಧಕರಿಗೆ ಸನ್ಮಾನ

0

ನೆಲ್ಯಾಡಿ: ಬಂಟರ ಯಾನೆ ನಾಡವರ ಮಾತೃಸಂಘ ಮಂಗಳೂರು ಹಾಗೂ ಪುತ್ತೂರು ತಾಲೂಕು ಬಂಟರ ಸಂಘ ಇದರ ಮಾರ್ಗದರ್ಶನದಲ್ಲಿ ನೆಲ್ಯಾಡಿ ವಲಯ ಬಂಟರ ಸಂಘದ ಆಶ್ರಯದಲ್ಲಿ ಸೋಣದ ಪೊರ್ಲು-2023, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ, ನೂತನ ಸಮಿತಿಯ ಪದ ಪ್ರಧಾನ ಕಾರ್ಯಕ್ರಮ ಸೆ.9ರಂದು ಬೆಳಿಗ್ಗೆ 11 ಗಂಟೆಗೆ ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೆಲ್ಯಾಡಿ ಪ್ರಧಾನ ಕಚೇರಿಯ ಕಲ್ಪವೃಕ್ಷ ಸಹಕಾರಿ ಸೌಧದ ಕಾಮಧೇನು ಸಭಾಂಗಣದಲ್ಲಿ ನಡೆಯಲಿದೆ ಎಂದು ನೆಲ್ಯಾಡಿ ವಲಯ ಬಂಟರ ಸಂಘದ ಅಧ್ಯಕ್ಷ ನಿತ್ಯಾನಂದ ಶೆಟ್ಟಿ ಮನವಳಿಕೆ, ಗೌರವಾಧ್ಯಕ್ಷ ಗುಡ್ಡಪ್ಪ ಶೆಟ್ಟಿ ಕಪಿಲ, ಸಂಚಾಲಕ ಕೆ.ಸತೀಶ್ ರೈ ಕೊಣಾಲುಗುತ್ತು, ಸಹಸಂಚಾಲಕ ಜಯಾನಂದ ಬಂಟ್ರಿಯಾಲ್, ಕಾರ್ಯದರ್ಶಿ ವಾಣಿ ಎಸ್.ಶೆಟ್ಟಿ, ಖಜಾಂಜಿ ರತ್ನಾಕರ ಶೆಟ್ಟಿ ಕೊಲ್ಯೊಟ್ಟು ಅವರು ತಿಳಿಸಿದ್ದಾರೆ.

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಕೋಡಿಂಬಾಡಿ ದೀಪ ಪ್ರಜ್ವಲನೆ ಮಾಡಲಿದ್ದಾರೆ. ಪುತ್ತೂರು ಬಂಟರ ಸಂಘದ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಸನ್ಮಾನಿಸಲಿದ್ದಾರೆ. ಜನ್ಮ ಫೌಂಡೇಷನ್ ಟ್ರಸ್ಟ್ನ ಹರ್ಷಕುಮಾರ್ ರೈ ಪ್ರತಿಭಾ ಪುರಸ್ಕಾರ ನೆರವೇರಿಸಲಿದ್ದಾರೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ನಿಕಟಪೂರ್ವ ಸದಸ್ಯೆ ವಿಜಯಲಕ್ಷ್ಮೀಪ್ರಸಾದ್ ರೈ ಆಶಯದ ಮಾತುಗಳನ್ನಾಡಲಿದ್ದಾರೆ. ಬಂಟರ ಯಾನೆ ನಾಡವರ ಮಾತೃಸಂಘ ಪುತ್ತೂರು ತಾಲೂಕು ಸಮಿತಿ ಸಂಚಾಲಕ ದಯಾನಂದ ರೈ ಮನವಳಿಕೆಗುತ್ತು, ಬಂಟರ ಯಾನೆ ನಾಡವರ ಮಾತೃಸಂಘ ಮಂಗಳೂರು ಇದರ ಉಪಾಧ್ಯಕ್ಷ ಹೇಮನಾಥ ಶೆಟ್ಟಿ ಕಾವು, ಪುತ್ತೂರು ಕೋಟಿ ಚೆನ್ನಯ್ಯ ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಯನ್ ಅವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ನೆಲ್ಯಾಡಿ ವಲಯ ಬಂಟರ ಸಂಘದ ಅಧ್ಯಕ್ಷ ನಿತ್ಯಾನಂದ ಶೆಟ್ಟಿ ಮನವಳಿಕೆ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here