ಮೊಟ್ಟೆತ್ತಡ್ಕದಲ್ಲಿ ರಿಕ್ಷಾ, ಕಾರು ಡಿಕ್ಕಿ

0

ಪುತ್ತೂರು: ಮೊಟ್ಟೆತ್ತಡ್ಕ ಎನ್.ಆರ್.ಸಿ.ಸಿ ಬಳಿ ಆಟೋ ರಿಕ್ಷಾ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿ ರಿಕ್ಷಾ ಪಲ್ಟಿಯಾಗಿ, ಚಾಲಕ ಗಾಯಗೊಂಡ ಘಟನೆ ಸೆ.8ರಂದು ನಡೆದಿದೆ.
ನರಿಮೊಗರು ಗ್ರಾಮದ ಅಬ್ಬಾಸ್ ಡಿ ಅವರು ಚಲಾಯಿಸುತ್ತಿದ್ದ ಆಟೋ ರಿಕ್ಷಾ ಮತ್ತು ರಮೇಶ್ ಅಂಗಿತ್ತಾಯ ಎಂಬವರು ಚಲಾಯಿಸುತ್ತಿದ್ದ ಕಾರು ನಡುವೆ ಮೊಟ್ಟೆತ್ತಡ್ಕದಲ್ಲಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಆಟೋ ರಿಕ್ಷಾ ಪಲ್ಟಿಯಾಗಿದ್ದು, ರಿಕ್ಷಾ ಚಾಲಕ ಅಬ್ಬಾಸ್ ಗಾಯಗೊಂಡಿದ್ದು, ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here