ನೆಲ್ಯಾಡಿ ಶ್ರೀರಾಮ ವಿದ್ಯಾಲಯದಲ್ಲಿ ಶ್ರೀಕೃಷ್ಣ ಲೋಕ

0

ನೆಲ್ಯಾಡಿ: ಶ್ರೀರಾಮ ವಿದ್ಯಾಲಯ, ಶ್ರೀರಾಮ ಶಿಶುಮಂದಿರ, ಶ್ರೀರಾಮ ಗ್ರಾಮ ವಿಕಾಸ ಸಮಿತಿ ನೆಲ್ಯಾಡಿ ಇದರ ಜಂಟಿ ಅಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯಕ್ತ ನೆಲ್ಯಾಡಿ ಶ್ರೀರಾಮ ವಿದ್ಯಾಲಯದ ಆವರಣದಲ್ಲಿ ಪುಟಾಣಿಗಳಿಗೆ ಶ್ರೀ ಕೃಷ್ಣ ಲೋಕ ಉತ್ಸವವನ್ನು ಆಯೋಜಿಸಲಾಯಿತು.


ಮುಖ್ಯ ಅತಿಥಿಯಾಗಿದ್ದ ಪಡುಬೆಟ್ಟು ವಿಷ್ಣುಮೂರ್ತಿ ದೇವಾಲಯದ ಅರ್ಚಕ ಆದಿತ್ಯ ಭಟ್ ಮತ್ತು ಅಖಿಲ ದಂಪತಿ ಶ್ರೀಕೃಷ್ಣನ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಕೃಷ್ಣ ಸಂದೇಶವನ್ನು ತಿಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಪುಟ್ಟ ಶ್ಯಾಮನನ್ನು ತೊಟ್ಟಿಲಲ್ಲಿ ಮಲಗಿಸಿ ಲಾಲಿಸಿ ಕೃಷ್ಣ-ರಾಧೆ ವೇಷಧಾರಿ ಪುಟಾಣಿಗಳಿಗೆ ಆರತಿ ಎತ್ತಲಾಯಿತು. ವಿದ್ಯಾಲಯದ ಆಡಳಿತ ಮಂಡಳಿಯ ಕೋಶಾಧಿಕಾರಿ ಜಿನ್ನಪ್ಪ ಪೂವಾಜೆ, ಶ್ರೀರಾಮ ಗ್ರಾಮವಿಕಾಸ ಸಮಿತಿಯ ಅಧ್ಯಕ್ಷ ಗಂಗಾಧರ ಶೆಟ್ಟಿ ಕೊಲ್ಯೊಟ್ಟು, ಮುಖ್ಯಶಿಕ್ಷಕ ಗಣೇಶ್ ವಾಗ್ಲೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗಂಗಾಧರ ಶೆಟ್ಟಿ ಕೊಲ್ಯೊಟ್ಟು ಸ್ವಾಗತಿಸಿ, ಗಣೇಶ್ ವಾಗ್ಲೆ ಶ್ರೀಮಾನ್ ವಂದಿಸಿದರು. ರೋಹಿಣಿ ಮಾತಾಜಿ ಕಾರ್ಯಕ್ರಮ ನಿರೂಪಿಸಿದರು.
ಕೃಷ್ಣ ವೇಷಧಾರಿ ಪುಟಾಣಿಗಳು ಮಡಕೆ ಒಡೆಯುವ ಮೂಲಕ ಆಟೋಟ ಸ್ಪರ್ಧೆಗಳಿಗೆ ಚಾಲನೆ ನೀಡಿದರು. ನಂತರ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಸಿ ಬಹುಮಾನಗಳನ್ನು ವಿತರಿಸಲಾಯಿತು. ವಿದ್ಯಾಲಯದ ಸಿಬ್ಬಂದಿವರ್ಗ, ವಿದ್ಯಾರ್ಥಿವೃಂದ, ಗ್ರಾಮವಿಕಾಸ ಸಮಿತಿಯ ಸದಸ್ಯರು, ಪೋಷಕರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here