ಆದರ್ಶ ವಿವಿಧೋದ್ದೇಶ ಸಹಕಾರ ಸಂಘದಿಂದ ವಿದ್ಯಾನಿಧಿ – ಧನಸಹಾಯ ವಿತರಣೆ

0

ಪುತ್ತೂರು: ಆದರ್ಶ ವಿವಿಧೋದ್ದೇಶ ಸಹಕಾರ ಸಂಘದಿಂದ ವಿದ್ಯಾನಿಧಿ – ಧನಸಹಾಯ ವಿತರಣೆ ಸಮಾರಂಭ ಸೆ.9ರಂದು ಪುತ್ತೂರು ಪ್ರಶಾಂತ್ ಮಹಲ್‌ನ ಸನ್ನಿಧಿ ಹಾಲ್‌ನಲ್ಲಿ ಜರಗಿತು. ವಿದ್ಯಾನಿಧಿ – ಧನಸಹಾಯ ವಿತರಣಾ ಸಮಾರಂಭವನ್ನು ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಗಿರೀಶ್ ನಂದನ್ ಎಂ ರವರು ಉದ್ಘಾಟಿಸಿದರು. ರೋಟರಿ ಜಿಲ್ಲಾ 3181ರ ಆಸಿಸ್ಟೆಂಟ್ ಗವರ್ನರ್ ಪುರಂದರ ರೈ ಮಿತ್ರಂಪಾಡಿರವರು ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕರಾದ ಕೆ.ಆರ್.ಗಂಗಾಧರ್‌ರವರು ಧನಸಹಾಯ ವಿತರಣೆಗೈದರು. ಮುಖ್ಯ ಅತಿಥಿಯಾಗಿ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ತ್ರಿವೇಣಿ ರಾವ್‌ರವರು ಭಾಗವಹಿಸಿದರು. ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಉಪಾಧ್ಯಕ್ಷ ಎನ್.ಸುಂದರ ರೈ ಸವಣೂರು ಹಾಗೂ ಮಹಾ ಪ್ರಬಂಧಕ ವಸಂತ್ ಜಾಲಾಡಿ ಉಪಸ್ಥಿತರಿದ್ದರು.
ಸಂಘದ ಅಧ್ಯಕ್ಷ ಕೆ.ಸೀತಾರಾಮ ರೈ ಸವಣೂರು ಸ್ವಾಗತಿಸಿ, ಬಾಪೂ ಸಾಹೇಬ್ ಕಾರ್ಯಕ್ರಮ ನಿರೂಪಿಸಿದರು. ಜೈರಾಜ್ ಭಂಡಾರಿ ಡಿಂಬ್ರಿ ವಂದಿಸಿದರು.

LEAVE A REPLY

Please enter your comment!
Please enter your name here