ನೆಲ್ಲಿಕಟ್ಟೆ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ವಿದ್ಯಾ ಜ್ಯೋತಿ ಎಲ್ ಕೆಜಿ ಮತ್ತು ಯುಕೆಜಿ ತರಗತಿ ಉದ್ಘಾಟನೆ

0

ಪುತ್ತೂರು: ನೆಲ್ಲಿಕಟ್ಟೆ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ರೋಟರಿ‌ಕ್ಲಬ್ ಪುತ್ತೂರು ಸಿಟಿ, ರೋಟರಿ ಕ್ಲಬ್ ಪುತ್ತೂರು ಸಿಟಿ ಚಾರಿಟೇಬಲ್ ಟ್ರಸ್ಟ್ ಇದರ ಆಶ್ರಯದಲ್ಲಿ ವಿದ್ಯಾ ಜ್ಯೋತಿ ಎಲ್ ಕೆಜಿ ಮತ್ತು ಯುಕೆಜಿ ಮತ್ತು ಅಂಗನವಾಡಿ ಪುನಶ್ಚೇತನ ರೋಟರಿ ಜಿಲ್ಲಾ ಯೋಜನೆಯನ್ನು ಶಾಸಕ ಅಶೋಕ್ ರೈ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಸರಕಾರ ಮಾಡಬೇಕಾದ ಕೆಲಸವನ್ನು ರೋಟರಿ ಕ್ಲಬ್ ಮಾಡುತ್ತಿರುವುದು ಶ್ಲಾಘನೀಯ, ರೋಟರಿ ಕ್ಲಬ್ ನಿಂದ ಸಮಾಜ ಸೇವೆ ನಿರಂತರವಾಗಿ ನಡೆಯುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಶಾಸಕರು ಮುಂದಿನ ಒಂದು ವರ್ಷದೊಳಗೆ ಎಲ್ಲಾ ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಎಲ್ ಕೆ ಜಿ ತರಗತಿ ಆರಂಭಿಸಲಾಗುವುದು ಮಾತ್ರವಲ್ಲ ಶಿಕ್ಷಕರ ನೇಮಕಾತಿಯೂ ಪೂರ್ಣಗೊಳ್ಳಲಿದೆ. ಇಂಗ್ಲೀಷ್ ಮಾದ್ಯಮದಲ್ಲಿ ಶಿಕ್ಷಣ ಅತೀ ಮುಖ್ಯವಾಗಿದ್ದು, ಸರಕಾರಿ ಶಾಲೆಯನ್ನು ಉಳಿಸಿ ಬೆಳೆಸುವ ಕೆಲಸ ಆಗಬೇಕಾಗಿದೆ ಎಂದು ಹೇಳಿದರು. ನಿಯೋಜಿತ ರೋಟರಿ ಜಿಲ್ಲಾ ಗವರ್ನರ್‌ ವಿಕ್ರಂ ದತ್ತ, ರೋಟರಿ ಕ್ಲಬ್ ಪುತ್ತೂರು ಸಿಟಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸುರೇಂದ್ರ ಕಿಣಿ, ಝೋನ್‌ 4 ರ ಅಸಿಸ್ಟಂಟ್‌ ಗವರ್ನರ್‌ ಲಾರೆನ್ಸ್‌ ಗೋನ್ಸಾಲ್ವಿಸ್‌ , ನಗರ ಸಬಾ ಸದಸ್ಯ ಶಕ್ತಿ ಸಿನ್ಹಾ, ನೆಲ್ಲಿಕಟ್ಟೆ ಸರಕಾರಿ ಹಿ.ಪ್ರಾ. ಶಾಲೆ ಮುಖ್ಯ ಶಿಕ್ಷಕಿ ಯಶೋಧ, ಎಸ್‌ ಡಿ ಎಂಸಿ ಅಧ್ಯಕ್ಷೆ ವಸುಧಾ, ರೊ. ಶ್ಯಾಮಲಾ ಎಂ ಶೆಟ್ಟಿ, ರೊ.ಗ್ರೇಸಿ ಗೊನ್ಸಾಲ್ವಿಸ್‌, ರೊ.ಸುಧಾಕರ್‌ ಶೆಟ್ಟಿ ಬಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಡಾ. ಶಶಿಧರ್‌ ಕಜೆ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here