ನಾಳೆ(ಸೆ.10) ಬೆಂಗಳೂರಿನಲ್ಲಿ ಎಸ್ಸೆಸ್ಸೆಫ್ ಗೋಲ್ಡನ್ ಫಿಫ್ಟಿ ಸಮಾವೇಶ-ಪುತ್ತೂರಿನಿಂದ ಸಾವಿರಾರು ಕಾರ್ಯಕರ್ತರು ಭಾಗಿ

0

ಪುತ್ತೂರು: ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ (ಎಸ್ಸೆಸ್ಸೆಫ್) ಇದರ ಐವತ್ತನೇ ವರ್ಷಾಚರಣೆಯ ಪ್ರಯುಕ್ತ ಗೋಲ್ಡನ್ ಫಿಫ್ಟಿ ಸಮಾವೇಶವು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸೆ.10ರಂದು ನಡೆಯಲಿದೆ.

ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ ಉಸ್ತಾದ್, ಮುಖ್ಯಮಂತ್ರಿ ಸಿದ್ಧರಾಮಯ್ಯ ಸಹಿತ ಹಲವಾರು ಧಾರ್ಮಿಕ, ಸಾಮಾಜಿಕ, ರಾಜಕೀಯ ನಾಯಕರು, ಚಿಂತಕರು ಭಾಗವಹಿಸಲಿದ್ದಾರೆ. ಈ ಸಮಾವೇಶದಲ್ಲಿ ಪುತ್ತೂರು ತಾಲ್ಲೂಕಿನಿಂದ ಸಾವಿರಾರು ಸಂಖ್ಯೆಯ ಕಾರ್ಯಕರ್ತರು, ಮುಸ್ಲಿಂ ಜಮಾಅತ್, ಎಸ್‌ವೈಎಸ್ ನಾಯಕರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಗೋಲ್ಡನ್ ಫಿಫ್ಟಿ ಸಮಾವೇಶದ ಸಮಾರೋಪ ಸಮಾರಂಭ ನವಂಬರ್ 23, 24, 25 ರಂದು ಮುಂಬೈಯ ಏಕತಾ ಮೈದಾನದಲ್ಲಿ ನಡೆಯಲಿದೆ ಎಂದು ಎಸ್ಸೆಸ್ಸೆಫ್ ಪುತ್ತೂರು ಡಿವಿಶನ್ ನಾಯಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here