ಸುದಾನ ಶಾಲೆಯಲ್ಲಿ ವಿಜ್ಞಾನ ಮಾದರಿಗಳ ಪ್ರದರ್ಶನ

0

ಪುತ್ತೂರು: ಪುತ್ತೂರಿನ ಸುದಾನ ವಸತಿ ಶಾಲೆಯಲ್ಲಿ ಸೆಪ್ಟೆಂಬರ್ 7 ರಂದು ವಿಜ್ಞಾನ ಮಾದರಿಗಳ ಪ್ರದರ್ಶನ ಮತ್ತು ಸ್ಪರ್ಧೆಯು ಆಯೋಜಿತವಾಗಿತ್ತು. ಬೌತಶಾಸ್ತ್ರ, ರಸಾಯನ ಶಾಸ್ತ್ರ, ಜೀವ ವಿಜ್ಞಾನ, ಪರಿಸರ ವಿಜ್ಞಾನ, ಬಾಹ್ಯಾಕಾಶ ವಿಜ್ಞಾನ, ಇಂಜಿನಿಯರಿಂಗ್ ಮತ್ತು ಕಂಪ್ಯೂಟರ್ ಸೈನ್ಸ್, ಗಣಿತ ಮುಂತಾದ ವಿಷಯಗಳಲ್ಲಿ ನಡೆದ ಪ್ರದರ್ಶನದಲ್ಲಿ 5ನೇ ತರಗತಿಯಿಂದ 10ನೇ ತರಗತಿಯವರೆಗಿನ ವಿದ್ಯಾರ್ಥಿಗಳು ಪಾಲ್ಗೊಂಡು, 65 ವಿಜ್ಞಾನ ಮಾದರಿಗಳು ಪ್ರದರ್ಶನಗೊಂಡವು.

ಶಾಲೆಯ ವಿಜ್ಞಾನ ಶಿಕ್ಷಕಿಯರಾದ ಪ್ರತಿಮಾ ಎನ್.ಜಿ, ಶ್ಯಾಮಲಾ, ನಿವೇದಿತಾ ಮತ್ತು ನಿರ್ಮಲಾ ತೀರ್ಪುಗಾರರಾಗಿ ಸಹಕರಿಸಿದರು. ಕಾರ್ಯಕ್ರಮವನ್ನು ಶಾಲೆಯ ’ಅವನಿ’ ವಿಜ್ಞಾನ ಸಂಘವು ಆಯೋಜಿಸಿದ್ದು ನಿರ್ದೇಶಕಿ ಶಾರದಾ ಮತ್ತು ರೇಖಾಮಣಿ ಮಾರ್ಗದರ್ಶನವನ್ನು ಮಾಡಿದರು. ಶಾಲಾ ಸಂಚಾಲಕರಾದ ರೆ. ವಿಜಯ ಹಾರ್ವಿನ್ ಮತ್ತು ಮುಖ್ಯ ಶಿಕ್ಷಕಿ ಶೋಭಾ ನಾಗರಾಜ್ ಪಾಲ್ಗೊಂಡ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

LEAVE A REPLY

Please enter your comment!
Please enter your name here