ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆ- ಕಡಬದ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಯಾನ್ವಿತ ಎಂಕೆ ತೃತೀಯ

0

ಕಡಬ: ದ.ಕ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಮತ್ತು ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆ ದೇರಳಕಟ್ಟೆ ಇವರ ಸಹಯೋಗದಲ್ಲಿ 2023-24ನೇ ಸಾಲಿನ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯು ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆ ದೇರಳೆಕಟ್ಟೆಯಲ್ಲಿ ಸೆ.9ರಂದು ಜರಗಿತು. ಇದರಲ್ಲಿ ಕಡಬದ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಒಂಬತ್ತನೆಯ ತರಗತಿಯ ವಿದ್ಯಾರ್ಥಿನಿ ಯಾನ್ವಿತ ಎಂ.ಕೆ. ಅವರು ಪ್ರೌಢಶಾಲಾ ಹುಡುಗಿಯರ 36-40 ಕೆಜಿ ವಿಭಾಗದಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇವರು ಕಡಬ ತನು ಎಲೆಕ್ಟ್ರಾನಿಕ್ಸ್ ನ ಮಾಲಕ ಮಂಜುನಾಥ ಕೊಲಂತ್ತಾಡಿ ಮತ್ತು ಗುಡ್ ಶಫರ್ಡ್ ಶಾಲಾ ಶಿಕ್ಷಕಿ ಪದ್ಮಾವತಿ ಅವರ ಪುತ್ರಿಯಾಗಿದ್ದಾರೆ. ಇವರಿಗೆ ಕರಾಟೆ ಶಿಕ್ಷಕ ಯಾದವ್ ಬೀರಂತಡ್ಕ ಅವರು ತರಬೇತಿಯನ್ನು ನೀಡಿರುತ್ತಾರೆ.

LEAVE A REPLY

Please enter your comment!
Please enter your name here