ಸೆ.12: ನೆಲ್ಯಾಡಿ ಶ್ರೀರಾಮ ವಿದ್ಯಾಲಯದ ನೂತನ ತರಗತಿ ಕೊಠಡಿಗಳ ಲೋಕಾರ್ಪಣೆ, ಆಂಗ್ಲ ಮಾಧ್ಯಮ ತರಗತಿಯ ಆರಂಭೋತ್ಸವ

0

ನೆಲ್ಯಾಡಿ: ನೆಲ್ಯಾಡಿ ಸೂರ್ಯನಗರ ಶ್ರೀರಾಮ ವಿದ್ಯಾಲಯದ ನೂತನ ತರಗತಿ ಕೊಠಡಿಗಳ ಲೋಕಾರ್ಪಣೆ ಮತ್ತು ಆಂಗ್ಲ ಮಾಧ್ಯಮ ತರಗತಿಯ ಆರಂಭೋತ್ಸವ ಸೆ.12ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿದೆ.

ವಿಧಾನಪರಿಷತ್ ಸದಸ್ಯ, ಮಾಜಿ ಸಚಿವರೂ ಆದ ಕೋಟ ಶ್ರೀನಿವಾಸ ಪೂಜಾರಿ ಅವರು ನೂತನ ಕೊಠಡಿಗಳ ಲೋಕಾರ್ಪಣೆ ಮಾಡಲಿದ್ದಾರೆ. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಸೌಂತ್ ಇಂಡಿಯಾ ಇಂಟರ್‌ನ್ಯಾಷನಲ್ ಫೆಡರೇಶನ್ ಆಫ್ ಇನ್ವೆಂರ‍್ಸ್ ಎಸೋಸಿಯೇಷನ್‌ನ ರೀಜನಲ್ ಡೈರೆಕ್ಟರ್ ವಿಶ್ವಾಸ್ ಯು.ಎಸ್., ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕ ಕೃಷ್ಣ ಶೆಟ್ಟಿ ಕಡಬ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಆಡಳಿತ ಮಂಡಳಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here