ಕಬಕ ಗ್ರಾಮ ಪಂಚಾಯತ್ ಗೆ ಸ್ವಚ್ಛ ಭಾರತ್ ಮಿಷನ್ ಪ್ರಶಸ್ತಿ-ಸೆ.11ರಂದು ಪ್ರಶಸ್ತಿ ಪ್ರದಾನ

0

ಪುತ್ತೂರು: ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಯೋಜನೆಯಡಿ ಸ್ವಚ್ಛ ಸರ್ವೆಕ್ಷಣಾ ಗ್ರಾಮೀಣ -2023ರ ಸಮೀಕ್ಷೆ ಯಲ್ಲಿ ಚಟುವಟಿಕೆ ಆಧಾರದ ಮೇಲೆ ಉತ್ತಮವಾಗಿ ಕಾರ್ಯನಿರ್ವಹಿಸಿದ ಕಬಕ ಗ್ರಾಮ ಪಂಚಾಯತ್ ದ.ಕ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಭಾಜನವಾಗಿದೆ.

ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಲಶಕ್ತಿ ಮಂತ್ರಾಲಯ ಇವರ ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಯೋಜನೆಯಡಿ ಸ್ವಚ್ಛ ನೈರ್ಮಲ್ಯ ಘಟಕಾಂಶಗಳು ಒಡಿಎಪ್ ಪ್ಲಸ್ ಸುಸ್ತಿರಗೊಳಿಸಲು ಹಮ್ಮಿಕೊಂಡಿರುವ ಚಟುವಟಿಕೆಗಳ ಕುರಿತು ಸಮೀಕ್ಷೆ ನಡೆಸಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಗ್ರಾಮ ಪಂಚಾಯತ್ ಗಳಿಗೆ ಜಿಲ್ಲಾ ಮಟ್ಟದಲ್ಲಿ ಈ ಪ್ರಶಸ್ತಿ ನೀಡಲಾಗುತ್ತದೆ.

ಸೆ.11 ಪ್ರಶಸ್ತಿ ಪ್ರದಾನ:
ಮಂಗಳೂರಿನ ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ಸೆ.11 ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ನಿರ್ದೇಶಕರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಪ್ರಶಸ್ತಿಗೆ ಆಯ್ಕೆಯಾದ ಗ್ರಾಮ ಪಂಚಾಯತ್ ನ ಅಧ್ಯಕ್ಷರು ಹಾಗೂ ಪಿಡಿಓ ಗಳು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here