ಪುತ್ತೂರು ನ್ಯಾಯಾಲಯದಲ್ಲಿ ಮೆಗಾ ಲೋಕ ಅದಾಲತ್ – 642 ಪ್ರಕರಣ ಇತ್ಯರ್ಥ, ರೂ.1.01 ಕೋಟಿ ಪರಿಹಾರ ವಿತರಣೆಗೆ ಆದೇಶ

0


ಪುತ್ತೂರು: ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಳ್ಳಲು ಸೆ.9ರಂದು ಪುತ್ತೂರಿನ ನ್ಯಾಯಾಲಯದಲ್ಲಿ ನಡೆದ ಮೆಗಾ ಲೋಕ ಅದಾಲತ್‌ನಲ್ಲಿ ಒಟ್ಟು 973 ಪ್ರಕರಣಗಳ ಪೈಕಿ 642 ಪ್ರಕರಣಗಳನ್ನು ರಾಜಿಯಲ್ಲಿ ಇತ್ಯರ್ಥಗೊಳಿಸಿ ಫಲಾನುಭವಿಗಳಿಗೆ ರೂ.1,01,87,038 ಪರಿಹಾರ ಮೊತ್ತವನ್ನು ವಿತರಿಸಲು ಆದೇಶಿಸಲಾಗಿದೆ.

ಮೆಗಾ ಲೋಕ ಅದಾಲತ್‌ನಲ್ಲಿ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ವ್ಯಾಜ್ಯಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸುವ, ಚೆಕ್ ಬೌನ್ಸ್, ವಿಮಾ ಹಣದ ಪ್ರಕರಣ, ಬ್ಯಾಂಕ್ ಹಾಗೂ ಇತರ ಕಂಪನಿಗಳೊAದಿಗೆ ಇರುವ ವ್ಯಾಜ್ಯಗಳಲ್ಲಿ ಕಕ್ಷಿದಾರರು ಒಪ್ಪುವ ರೀತಿಯಲ್ಲಿ ಇತ್ಯರ್ಥ ಮಾಡುವ ಪ್ರಯತ್ನ ನಡೆಯಿತು.
ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಪ್ರಕರಣಗಳು ಮಂಗಳೂರು ನ್ಯಾಯಾಲಯದಲ್ಲಿ ನಡೆಯಿತು. ಅಲ್ಲಿ ಇತ್ಯರ್ಥವಾದ ಪ್ರಕರಣಗಳ ಮಾಹಿತಿ ಲಭ್ಯವಾಗಿಲ್ಲ. ಉಳಿದಂತೆ, ಪುತ್ತೂರು ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಧೀಶ ಮತ್ತು ಹೆಚ್ಚುವರಿ ಮುಖ್ಯ ನ್ಯಾಯಿಕ ದಂಡಾಧಿಕಾರಿ ಆರ್.ಪಿ ಗೌಡ ಅವರ ನ್ಯಾಯಾಲಯದಲ್ಲಿ 150 ಪ್ರಕರಣಗಳಲ್ಲಿ 82 ಇತ್ಯರ್ಥಗೊಂಡಿದ್ದು ರೂ.25,72,860 ಪರಿಹಾರ ವಿತರಣೆಗೆ ಆದೇಶ ಆಗಿದೆ. ಅಪರ ಹಿರಿಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶೆ ಮತ್ತು ಜೆಎಮ್‌ಎಫ್‌ಸಿ ಪ್ರಿಯಾ ಜೋವಲೆಕರ್ ಅವರ ನ್ಯಾಯಾಲಯದಲ್ಲಿ 285 ಪ್ರಕರಣಗಳಲ್ಲಿ 222 ಪ್ರಕರಣ ಇತ್ಯರ್ಥಗೊಂಡಿದ್ದು, ರೂ.38,04,900 ವಿತರಣೆಗೆ ಆದೇಶ ಆಗಿದೆ.

ಪ್ರಧಾನ ಸಿವಿಲ್ ನ್ಯಾಯಾಲಯ, ಜೆಎಮ್‌ಎಫ್‌ಸಿ ನ್ಯಾಯಾಧೀಶೆ ಅರ್ಚನಾ ಉನ್ನಿತಾನ್ ಅವರ ನ್ಯಾಯಾಲಯದಲ್ಲಿ 164 ಪ್ರಕರಣಗಳಲ್ಲಿ 77 ಪ್ರಕರಣಗಳು ಇತ್ಯರ್ಥಗೊಂಡಿದ್ದು ರೂ.35,17,150 ವಿತರಣೆಗೆ ಆದೇಶ ಆಗಿದೆ. ಅಪರ ಸಿವಿಲ್ ನ್ಯಾಯಾಧೀಶ ಮತ್ತು ಜೆಎಮ್‌ಎಫ್‌ಸಿ ಶಿವಣ್ಣ ಹೆಚ್.ಆರ್ ಅವರ ನ್ಯಾಯಾಲಯದಲ್ಲಿ 136 ಪ್ರಕರಣಗಳಲ್ಲಿ 70 ಇತ್ಯರ್ಥಗೊಂಡಿದ್ದು, ರೂ.2,73,628 ವಿತರಣೆಗೆ ಆದೇಶ ಆಗಿದೆ. 2ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮತ್ತು ಜೆಎಮ್‌ಎಫ್‌ಸಿ ಯೋಗೇಂದ್ರ ಶೆಟ್ಟಿ ಅವರ ನ್ಯಾಯಾಲಯದಲ್ಲಿ 238 ಪ್ರಕರಣಗಳಲ್ಲಿ 191 ಪ್ರಕರಣ ಇತ್ಯರ್ಥಗೊಂಡಿದ್ದು, ರೂ.1,01,87,038 ವಿತರಣೆಗೆ ಆದೇಶ ಆಗಿದೆ.ಪ್ರಕರಣಗಳ ಇತ್ಯರ್ಥಕ್ಕೆ ಸಂಧಾನಕಾರರಾಗಿ ನ್ಯಾಯವಾದಿಗಳಾದ ಅಶ್ವಿತ್ ಕಂಡಿಗ, ಪ್ರಿಯ ಮಹೇಶ್, ಪ್ರಮೀಳಾ ಎಮ್, ಪ್ರಶಾಂತ್ ಪಿ.ಕೆ, ವಿಮಲೇಶ್ ಎಸ್.ಕೆ ಅವರು ಸಹಕರಿಸಿದರು.ಸದ್ರಿ ವ್ಯಾಜ್ಯಗಳಲ್ಲಿ ಸಂಧಾನಕಾರ ವಕೀಲರನ್ನು ವಕೀಲರ ಸಂಘದ ಅಧ್ಯಕ್ಷ ಮನೋಹರ್ ಕೆ.ವಿ.ಅವರು ನೇಮಕ ಮಾಡಿದ್ದರು.

ಮೆಗಾ ಲೋಕ ಅದಾಲತ್‌ನಲ್ಲಿ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ವ್ಯಾಜ್ಯಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸುವ, ಚೆಕ್ ಬೌನ್ಸ್, ವಿಮಾ ಹಣದ ಪ್ರಕರಣ, ಬ್ಯಾಂಕ್ ಹಾಗೂ ಇತರ ಕಂಪನಿಗಳೊAದಿಗೆ ಇರುವ ವ್ಯಾಜ್ಯಗಳಲ್ಲಿ ಕಕ್ಷಿದಾರರು ಒಪ್ಪುವ ರೀತಿಯಲ್ಲಿ ಇತ್ಯರ್ಥ ಮಾಡುವ ಪ್ರಯತ್ನ ನಡೆಯಿತು.

LEAVE A REPLY

Please enter your comment!
Please enter your name here