ತಾ|ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕ-ಬಾಲಕಿಯರ ಫುಟ್ಬಾಲ್ ಪಂದ್ಯಾಟದ ಉದ್ಘಾಟನೆ

0

ಪುತ್ತೂರು: ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಕಬಕ, ಇಲ್ಲಿ ಪುತ್ತೂರು ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕ-ಬಾಲಕಿಯರ ಫುಟ್ಬಾಲ್ ಪಂದ್ಯಾಟವು ಸೆ.9 ರಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕಬಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಶೀಲಾ ನೆರವೇರಿಸಿದರು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಎಂ.ಪಿ ಅಬ್ಬಾಸ್ ರವರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕಬಕ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರು, ಸದಸ್ಯರು, ತಾಲೂಕು ಅಕ್ಷರ ದಾಸೋಹದ ಸಹಾಯಕ ನಿರ್ದೇಶಕರಾದ ವಿಷ್ಣುಪ್ರಸಾದ್ ಸಿ, ತಾಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅಬ್ರಹಾಂ ಎಸ್.ಎ ಹಾಗೂ ಹಲವಾರು ಗಣ್ಯರು ಉಪಸ್ಥಿತರಿದ್ದರು. ಶಾಲಾ ಮುಖ್ಯಗುರುಗಳಾದ ಸುರೇಖಾ ಸ್ವಾಗತಿಸಿ, ಶಿಕ್ಷಕಿ ಸುಮಿತ್ರಾ ವಂದಿಸಿದರು. ಶಿಕ್ಷಕಿ ಶಾಂತ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here