ಪುತ್ತೂರು ತಾ| ಮಟ್ಟದ ಪ್ರೌಢಶಾಲಾ ಬಾಲಕ/ಬಾಲಕಿಯರ ಪುಟ್ಬಾಲ್ ಪಂದ್ಯಾಟ-ರಾಮಕುಂಜ ಕ.ಮಾ.ಪ್ರೌಢಶಾಲಾ ಬಾಲಕಿಯರ ತಂಡ ಪ್ರಥಮ

0

ರಾಮಕುಂಜ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಇದರ ಆಶ್ರಯದಲ್ಲಿ ಸರಕಾರಿ ಪ್ರೌಢಶಾಲೆ ಕಬಕದಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ ಹಾಗೂ ಬಾಲಕಿಯರ ಪುಟ್ಬಾಲ್ ಪಂದ್ಯಾಟದ ಬಾಲಕಿಯರ ವಿಭಾಗದಲ್ಲಿ ರಾಮಕುಂಜ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.

  • ತಂಡಕ್ಕೆ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಪ್ರಣಾಮ್ ತರಬೇತಿ ನೀಡಿದ್ದಾರೆ. ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಪ್ರಫುಲ್ಲ ರೈ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದ್ದರು. ಶಾಲಾ ಮುಖ್ಯಗುರು ಸತೀಶ್ ಭಟ್, ಶಾಲಾ ಶಿಕ್ಷಕ ವೃಂದ ಹಾಗೂ ಆಡಳಿತ ಮಂಡಳಿಯವರು ಸಹಕರಿಸಿದ್ದರು.

LEAVE A REPLY

Please enter your comment!
Please enter your name here