ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ವಿಜ್ಞಾನ ವಿಚಾರಗೋಷ್ಠಿ

0

ಪುತ್ತೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಪುತ್ತೂರು ಮತ್ತು ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆ ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ವಿಜ್ಞಾನ ವಿಚಾರಗೋಷ್ಠಿ ಸ್ಪರ್ಧೆ ಆಯೋಜಿಸಲಾಯಿತು. ಪುತ್ತೂರು ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಂಯೋಜಕಿ ಅಮೃತಾಕಲಾರವರು ವೇದಿಕೆಯಲ್ಲಿರುವ ಗಣ್ಯರ ಜೊತೆಗೂಡಿ ದೀಪ ಬೆಳಗಿಸಿ ಕಾರ‍್ಯಕ್ರಮ ಉದ್ಘಾಟಿಸಿ ಮಾತನಾಡಿ ಸಿರಿ ಧಾನ್ಯಗಳ ಮಹತ್ವವನ್ನು ಚುಟುಕಾಗಿ ತಿಳಿಸಿದರು. ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಾಧ್ಯಾಪಕ ಪ್ರಶಾಂತ್ ಭಟ್ ಮತ್ತು ಪಾಪೆಮಜಲು ಪ್ರೌಢಶಾಲೆಯ ಸಹ ಶಿಕ್ಷಕ ಹರಿಪ್ರಸಾದ್ ಕೆ. ರವರು ತೀರ್ಪುಗಾರರಾಗಿ ಸಹಕರಿಸಿದರು. ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲಾ ವಿದ್ಯಾರ್ಥಿನಿಯರು ಪ್ರಾರ್ಥನಾ ಗೀತೆಯನ್ನು ಹಾಡಿದರು. ಶಾಲಾ ಮುಖ್ಯ ಶಿಕ್ಷಕಿ ರೋಸಲಿನ್ ಲೋಬೊ ಸ್ವಾಗತಿಸಿದರು.
ಒಟ್ಟು 22 ಶಾಲೆಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿ, ಫಾತಿಮತ್ ಫಿಝಾ ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆ ಪ್ರಥಮ, ಅರ್ಪಿತಾ ಎ. ಸರಕಾರಿ ಪದವಿ ಪೂರ್ವ ಕಾಲೇಜು ಉಪ್ಪಿನಂಗಡಿ ದ್ವಿತೀಯ ಹಾಗೂ ಲಕ್ಷ್ಯಾ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಪುತ್ತೂರು ಇವರು ತೃತೀಯ ಸ್ಥಾನವನ್ನು ಗಳಿಸಿದರು.
ಸ್ಪರ್ಧೆಯ ನಂತರ ಸಮಾರೋಪ ಕಾರ್ಯಕ್ರಮವು ಜರುಗಿತು. ಕಾರ್ಯಕ್ರಮದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಶಾಲಾ ಮುಖ್ಯ ಶಿಕ್ಷಕಿ ರೋಸಲಿನ್ ಲೋಬೋರವರು ಪ್ರಶಸ್ತಿ ಪತ್ರಗಳನ್ನು ವಿತರಿಸಿದರು. ವಿಜ್ಞಾನ ಶಿಕ್ಷಕರಾದ ರೂಪಾ ಡಿ. ಕೋಸ್ಟ, ಲೆನಿಟಾ ಮೊರಾಸ್, ಹರಿಣಾಕ್ಷಿ, ಜೋಯ್ಲಿನ್ ರೊಡ್ರಿಗಸ್, ಸುನಿತಾ ಪಿಂಟೊ, ಭಾವನಾ ಸುಧೀರ್ ಸಹಕರಿಸಿದರು. ಇನಾಸ್ ಗೊನ್ಸಾಲ್ವಿಸ್ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here