ಜೆಸಿಐ ವಿಟ್ಲ ಘಟಕದಿಂದ ಪೋಕ್ಸೋ ಕಾಯ್ದೆ, ಮಾದಕ ವಸ್ತುಗಳ ವಿರೋಧಿ ಜಾಗೃತಿ, ರಸ್ತೆ ಸುರಕ್ಷತೆ, ಸಂಚಾರ ನಿಯಮಗಳ ಮಾಹಿತಿ ಕಾರ್ಯಾಗಾರ

0

ವಿಟ್ಲ: ಜೆಸಿಐ ಸಪ್ತಾಹ 2023ರ ಮೂರನೇ ದಿನದ ಕಾರ್ಯಕ್ರಮದ ಪ್ರಯುಕ್ತ ಜೆಸಿಐ ವಿಟ್ಲ ಘಟಕದಿಂದ ವಿಟ್ಲ ಜೆಸೀಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗ ಪೋಕ್ಸೋ ಕಾಯ್ದೆ, ಮಾದಕ ವಸ್ತುಗಳ ವಿರೋಧಿ ಜಾಗೃತಿ ಹಾಗೂ ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮಗಳ ಕುರಿತ ಮಾಹಿತಿ ಕಾರ್ಯಾಗಾರ ನಡೆಯಿತು.

ಕಾರ್ಯಕ್ರಮವನ್ನು ವಿಟ್ಲ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಹೆಚ್.ಈ. ನಾಗರಾಜ್ ರವರು ಉದ್ಘಾಟಿಸಿ ಸಂಪನ್ಮೂಲ ವ್ಯಕ್ತಿಯಾಗಿ ವಿಧ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಘಟಕದ ಪೂರ್ವಾಧ್ಯಕ್ಷರುಗಳಾದ ಶ್ರೀಧರ್ ಶೆಟ್ಟಿ ಹಾಗೂ ಶ್ರೀ ಪ್ರಕಾಶ್ ರವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ವಿಟ್ಲ ಜೇಸೀಸ್ ಆಂಗ್ಲ ಶಾಲೆಯ ಪ್ರಾಂಶುಪಾಲರಾದ ಜಯರಾಮ ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಘಟಕಾಧ್ಯಕ್ಷರಾದ ಪರಮೇಶ್ವರ ಹೆಗಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಪ್ತಾಹದ ನಿರ್ದೇಶಕರಾದ ರಿತೆಷ್ ಶೆಟ್ಟಿ ವಂದಿಸಿದರು. ಸುಮಾರು 300 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಸಂವಾದದಲ್ಲಿ ಭಾಗವಹಿಸಿ ಮಾಹಿತಿಯ ಸದುಪಯೋಗ ಪಡೆದುಕೊಂಡರು.

LEAVE A REPLY

Please enter your comment!
Please enter your name here