ಉಪ್ಪಿನಂಗಡಿ: ಹಿರಿಯರ ಸೇವಾ ಪ್ರತಿಷ್ಠಾನದ ಸಭೆ

0

ಉಪ್ಪಿನಂಗಡಿ: ಸಂಪಾದನೆಯ ನಿರ್ದಿಷ್ಟ ಭಾಗವನ್ನು ಸಮಾಜ ಸೇವಾ ಕಾರ್ಯಗಳಿಗೆ ವಿನಯೋಗಿಸಿ ಸಮಸ್ಯೆಗಳಿಗೆ ಸ್ಪಂದಿಸುವುದರಿಂದ ಮಾನಸಿಕ ನೆಮ್ಮದಿ ಸಿಗಲು ಸಾಧ್ಯ ಎಂದು ನಿವೃತ್ತ ಬಿಎಸ್‌ಎಫ್ ಕಮಾಂಡೆಂಟ್ ಡಿ. ಚಂದಪ್ಪ ಮೂಲ್ಯ ತಿಳಿಸಿದರು.


ಉಪ್ಪಿನಂಗಡಿ ರಾಮನಗರದ ಶ್ರೀ ಶಾರದಾ ಕಲಾ ಮಂಟಪದಲ್ಲಿ ಜರಗಿದ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಮೆಲ್ಕಾರ್ ಬಂಟ್ವಾಳ ಇದರ ಕೇಂದ್ರ ಸಮಿತಿಯ ಸಭೆಯಲ್ಲಿ ಅವರು ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು. ಸೇನಾ ಪಡೆಯಲ್ಲಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ ಕೆಲವು ರೋಚಕ ಘಟನೆಗಳ ಬಗ್ಗೆ ಮಾಹಿತಿಯನ್ನು ಅವರು ನೀಡಿದರು.
ಕಾರ್ಯಕ್ರಮ ಉದ್ಘಾಟಿಸಿದ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಮಾಜಿ ಸದಸ್ಯ ಜಿ. ಕೃಷ್ಣರಾವ್ ಅರ್ತಿಲ ಮಾತನಾಡಿ, ಹಿರಿಯರು ಸಕ್ರೀಯರಾಗಿರುವಂತೆ ಮಾಡುವಲ್ಲಿ ಪ್ರತಿಷ್ಠಾನವು ಕಾರ್ಯಕ್ರಮಗಳನ್ನು ನಡೆಸುತ್ತಿರುವುದು ಉತ್ತಮ ಬೆಳವಣಿಗೆಯಂದು ತಿಳಿಸಿದರು.


ಪ್ರತಿಷ್ಠಾನದ ಅಧ್ಯಕ್ಷ ಕಯ್ಯೂರು ನಾರಾಯಣ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪ್ರಮುಖರಾದ ಜಯರಾಮ ಭಂಡಾರಿ ಧರ್ಮಸ್ಥಳ, ಅಂಬಾಪ್ರಸಾದ್ ಪಾತಾಳ, ಎನ್.ಉಮೇಶ ಶೆಣೈ, ಭವಾನಿ ಶಂಕರ ಶೆಟ್ಟಿ, ಸೀತಾರಾಮ ಶೆಟ್ಟಿ, ಕೆದಿಮಾರು ಶಂಕರ್ ಭಟ್, ಚಂದ್ರಶೇಖರ ಆಳ್ವ ಪಡುಮಲೆ, ಕೃಷ್ಣ ಶರ್ಮ ಅನಾರ್, ಮಹಾಲಿಂಗೇಶ್ವರ ಭಟ್ ಪೆರಿಯಡ್ಕ, ಗೋಪಾಲ ಶೆಟ್ಟಿ ಕಳೆಂಜ, ಸುರೇಶರಾವ್ ಬನ್ನೆಂಗಳ, ರಾಮಕೃಷ್ಣ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.
ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ಸ್ವಾಗತಿಸಿ, ಲೋಕೇಶ ಹೆಗ್ಡೆ ವಂದಿಸಿದರು.

LEAVE A REPLY

Please enter your comment!
Please enter your name here