ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಗೆ ವಿವೇಕಾನಂದ ಪ.ಪೂ ಕಾಲೇಜಿನ ವಿನಯ್ ಡಿ ಆಯ್ಕೆ

0

ಪುತ್ತೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಕಲ್ಲಡ್ಕದ ಶ್ರೀರಾಮ ಪದವಿ ಪೂರ್ವ ಕಾಲೇಜಿನ ಸಹಭಾಗಿತ್ವದಲ್ಲಿ ನಡೆದ ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿನಯ್ ಡಿ ಬಾಲಕರ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಈತನು ಬೆಂಗಳೂರಿನ ದಯಾನಂದ ಆರ್ ಸಿ ಮತ್ತು ವಿದ್ಯಾ ಕೆ ಇ ರವರ ಸುಪುತ. ಈತನ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here