ವಿದ್ಯಾಭಾರತಿ ಜಿಲ್ಲಾ ಮಟ್ಟದ ಕ್ರೀಡಾಕೂಟ-ಪ್ರಿಯದರ್ಶಿನಿಯ ಧನ್ವಿ ಎ. ಎಂ. ಪ್ರಾಂತ ಮಟ್ಟಕ್ಕೆ ಆಯ್ಕೆ

0

ಪುತ್ತೂರು: ವಿವೇಕಾನಂದ ಕಾಲೇಜು ಪುತ್ತೂರು ನಗರ ಕ್ರೀಡಾಂಗಣದಲ್ಲಿ ಸೆ. 8, 9 ರಂದು ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಬೆಟ್ಟಂಪಾಡಿ ಪ್ರಿಯದರ್ಶಿನಿ ವಿದ್ಯಾಸಂಸ್ಥೆಯ 8 ನೇ ತರಗತಿ ವಿದ್ಯಾರ್ಥಿನಿ ಧನ್ವಿ ಎ.ಎಂ. 14ರ ವಯೋಮಾನದ ಬಾಲ ವರ್ಗದ 600 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಮತ್ತು 400 ಮೀಟರ್ ಓಟದಲ್ಲಿ ತೃತೀಯ ಸ್ಥಾನವನ್ನು ಪಡೆದು ಮಂಡ್ಯದ ಸೇಡಂನಲ್ಲಿ ನಡೆಯುವ ಪ್ರಾಂತ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ. ಹಾಗೂ 8 ನೇ ತರಗತಿ ವಿದ್ಯಾರ್ಥಿನಿಯರಾದ ಧನ್ವಿ ಎ.ಎಂ., ವೃಷ್ಟಿ, ಶಾರ್ವಿ ಮತ್ತು ಸಾಕ್ಷ್ಯ 4×100 ಮೀಟರ್ ರಿಲೇಯಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.

LEAVE A REPLY

Please enter your comment!
Please enter your name here