ಸೆ.14: ಫಿಲೋಮಿನಾ ಪ.ಪೂ.ಕಾಲೇಜಿನಲ್ಲಿ ‘ಪ್ರತಿಭಾ- 2023’ ಪ್ರೌಢ ಶಾಲಾ ಮಟ್ಟದ ಸ್ಪರ್ಧೆ

0

ಪುತ್ತೂರು : ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಪ್ರೌಢ ಶಾಲಾ ವಿದ್ಯಾರ್ಥಿಗಳ ಪ್ರತಭೆಯನ್ನು ಅನಾವರಣಗೊಳಿಸಲು ಆಯೋಜಿಸಲಾದ ಜಿಲ್ಲಾಮಟ್ಟದ ಪ್ರತಿಭಾ – 2023 ಕಾರ್ಯಕ್ರಮವು ಸೆಪ್ಟೆಂಬರ್ 14ರಂದು ಕಾಲೇಜಿನ ಬೆಳ್ಳಿ ಹಬ್ಬದ ಸಭಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಪುತ್ತೂರಿನ ಬೊಳ್ವಾರ್ ಮೆಘಾ ಸೆಂಟರ್ ನ ಮಾಲಕರಾದ ರೊಟೆರಿಯನ್ ಆಸ್ಕರ್ ಆನಂದ್ ನೆರವೇರಿಸಲಿದ್ದು, ಮುಖ್ಯ ಅತಿಥಿಗಳಾಗಿ ಕಾಲೇಜಿನ ಕ್ಯಾಂಪಸ್ ನಿರ್ದೇಶಕರಾದ ರೆ.ಫಾ. ಸ್ಟ್ಯಾನಿ ಪಿಂಟೋ ಹಾಗೂ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ಜೆರಾಲ್ಡ್ ಡಿ ಕೋಸ್ಟಾ ವಹಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ರೆ.ಫಾ. ಲಾರೆನ್ಸ್ ಮಸ್ಕರೇನಸ್ ವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here