ಪುತ್ತೂರು: ಲಾಭಾಂಶದಲ್ಲಿ ಮುತ್ತೂಟು ಫೈನಾನ್ಸ್ ನಿಂದ ಸರಕಾರಿ ಶಾಲೆಯಲ್ಲಿ ಕೊಠಡಿ ನಿರ್ಮಾಣಮಾಡಿದ್ದಾರೆ.ಸರಕಾರ ಮಾಡಬೇಕಾದ ಕೆಲಸವನ್ನು ಮುತ್ತೂಟಿನವರು ಮಾಡಿದ್ದಾರೆ.1500 ಮಕ್ಕಳಿರುವ ವಿಟ್ಲ ಸರಕಾರಿ ಪ್ರೌಢ ಶಾಲೆ ಗ್ರೇಟ್.ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಸಿಗುವಂತಾಗಬೇಕು ಎಂದು ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ವಿಟ್ಲ ಸರಕಾರಿ ಪ್ರೌಢ ಶಾಲೆಯಲ್ಲಿ ಕೊಠಡಿ ಮತ್ತು ಪ್ರಯೋಗಾಲಯ ಉದ್ಘಾಟಿಸಿ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ವಿಟ್ಲದಲ್ಲಿ ಖಾಸಗಿ ಶಾಲೆ ಇದ್ದರೂ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿರುವುದು ಶ್ಲಾಘನೀಯವಾಗಿದೆ.ಶಾಲೆಗೆ ಶಿಕ್ಷಕರ ನೇಮಕ ಮಾಡಲಾಗುವುದು ಎಂದು ಭರವಸೆ ನೀಡಿದರು.