ವಿವೇಕಾನಂದ ಕ. ಮಾ ಶಾಲೆಯಲ್ಲಿ ತಾಲೂಕು ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆ

0

ಪುತ್ತೂರು: ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳುತ್ತಾ ಪ್ರತಿಯೊಂದು ನಂಬಿಕೆ ಆಚರಣೆಗಳ ಹಿಂದಿರುವ ವೈಜ್ಞಾನಿಕ ಸತ್ಯವನ್ನು ತಿಳಿದುಕೊಳ್ಳಬೇಕು ವಿಜ್ಞಾನ ಸಂಶೋಧನೆಗಳ ಸಾಧನೆಗಳು ಮನುಕುಲದ ಒಳಿತಿಗಾಗಿ ಬಳಸಿಕೊಳ್ಳಬೇಕೇ ಹೊರತು ವಿನಾಶಕ್ಕಲ್ಲ ಎಂಬುವುದಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣ ಸಂಯೋಜಕ ಹರಿಪ್ರಸಾದ್ ಹೇಳಿದರು.

ಅವರು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ವಿಜ್ಞಾನ ನಾಟಕ ಸ್ಪರ್ಧೆಯ ಉದ್ಘಾಟನಾ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಸಭಾಧ್ಯಕ್ಷತೆಯನ್ನು ವಹಿಸಿದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಆಡಳಿತ ಮಂಡಳಿಯ ಸಂಚಾಲಕ ವಸಂತ ಸುವರ್ಣ ಸ್ಪರ್ಧಾಳುಗಳಿಗೆ ಶುಭ ಹಾರೈಸಿದರು. ವೇದಿಕೆಯಲ್ಲಿ ವಿಜ್ಞಾನ ನಾಟಕ ನೋಡಲ್ ಅಧಿಕಾರಿ ಅಮೃತ ಕಲಾ, ತೀರ್ಪುಗಾರರಾಗಿ ಆಗಮಿಸಿದ ಅರವಿಂದ ಕುಡ್ಲ ಮತ್ತು ಎ ಎನ್ ಕೊಳಂಬೆ ಹಾಗೂ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಮುಖ್ಯಗುರು ಆಶಾ ಬೆಳ್ಳಾರೆ ಉಪಸ್ಥಿತರಿದ್ದರು. ರೇಷ್ಮಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here