ಪುತ್ತೂರು: ಸಂಸದ ನಳಿನ್ ಕುಮಾರ್ ಕಟೀಲ್ ಸೆ.14ರಂದು ಪುತ್ತೂರಿಗೆ ಆಗಮಿಸಿದ್ದು ಬಿಜೆಪಿ ಕಚೇರಿಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ ಮಾಡುತ್ತಿದ್ದಾರೆ.ಬೆ.10ರಿಂದ ಆರಂಭಗೊಂಡಿದ್ದು, ಮಧ್ಯಾಹ್ನದವರೆಗೆ ಅಹವಾಲು ಸ್ವೀಕಾರ ಮಾಡಲಿದ್ದಾರೆ.ಈ ಸಂದರ್ಭ ಬಿಜೆಪಿ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲದ ಅಧ್ಯಕ್ಷ ಪಿ ಜಿ ಜಗನ್ನಿವಾಸ ರಾವ್, ಜಿಲ್ಲಾ ಕಾರ್ಯದರ್ಶಿ ಬೂಡಿಯಾರು ರಾಧಾಕೃಷ್ಣ ರೈ, ಚನಿಲ ತಿಮ್ಮಪ್ಪ ಶೆಟ್ಟಿ, ಎಸ್ ಅಪ್ಪಯ್ಯ ಮಣಿಯಾಣಿ, ಅರ್ ಸಿ ನಾರಾಯಣ, ಚಂದ್ರಶೇಖರ್ ರಾವ್ ಬಪ್ಪಳಿಗೆ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.ಮಧ್ಯಾಹ್ನ ನಂತರ ವಿವಿಧ ಕಾಮಗಾರಿಗಳ ವೀಕ್ಷಣೆ ಮಾಡಲಿದ್ದಾರೆ.