ಥ್ರೋ ಬಾಲ್ ಪಂದ್ಯಾಟ – ಪೆರಾಜೆ ವಿದ್ಯಾನಗರ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ನಾಲ್ಕು ತಂಡಗಳು ಪ್ರಥಮ

0

ವಿಟ್ಲ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಬಂಟ್ವಾಳ ತಾಲೂಕು, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಬಂಟ್ವಾಳ ತಾಲೂಕು ಮತ್ತು ದ. ಕ. ಜಿ. ಪ. ಉ. ಹಿ. ಪ್ರಾ. ಶಾಲೆ ಅನಂತಾಡಿ ಇದರ ಸಂಯುಕ್ತ ಆಶ್ರಯದೊಂದಿಗೆ ಬಂಟ್ವಾಳ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ವಿಭಾಗದ ಥ್ರೋಬಾಲ್ ಪಂದ್ಯಾಟ ಅನಂತಾಡಿ ಹಿ.ಪ್ರಾ ಶಾಲೆಯಲ್ಲಿ ನಡೆಯಿತು.

ಈ ಪಂದ್ಯಾಟದಲ್ಲಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಪ್ರಾಥಮಿಕ ವಿಭಾಗದ ಬಾಲಕರ ತಂಡ ಪ್ರಥಮ ಸ್ಥಾನ, ಬಾಲಕಿಯರ ತಂಡ ಪ್ರಥಮ ಸ್ಥಾನ ಹಾಗೂ ಪ್ರೌಢ ವಿಭಾಗದ ಬಾಲಕರ ತಂಡ ಪ್ರಥಮ ಸ್ಥಾನ ಮತ್ತು ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ. ಇವರನ್ನು ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ದಿನಕರ ಪೂಜಾರಿ ಮತ್ತು ವಿಶಾಲಾಕ್ಷಿ ಹೆಚ್ ಆಳ್ವರವರು ತರಬೇತುಗೊಳಿಸಿದ್ದಾರೆ.

LEAVE A REPLY

Please enter your comment!
Please enter your name here