ರಾಜ್ಯದಲ್ಲಿ ಭ್ರಷ್ಟಾಚಾರಿಗಳ ಕೂಟದ ಸರಕಾರವಿದೆ -ಪುತ್ತೂರಿನಲ್ಲಿ ಸಾರ್ವಜನಿಕ ಅಹವಾಲು ಸ್ವೀಕರಿಸಿ ಸಂಸದ ನಳಿನ್ ಕುಮಾರ್‌ ಕಟೀಲ್ ಹೇಳಿಕೆ

0

ಪುತ್ತೂರು: ರಾಜ್ಯದಲ್ಲಿ ಸಚಿವರ ಮೇಲೆ ಅಧಿಕಾರಿಗಳೇ ಭ್ರಷ್ಟಾಚಾರ ಆರೋಪಗಳನ್ನು ಹೊರಿಸಿದ್ದಾರೆ. ಆದರೆ ಸರಕಾರ ಮೌನ ವಹಿಸುವ ಮೂಲಕ ರಾಜ್ಯದಲ್ಲಿ ಭ್ರಷ್ಟಾಚಾರಿಗಳ ಕೂಟದ ಸರಕಾರ ಇರುವುದು ಸ್ಪಷ್ಟವಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಸರಕಾರದ ವಿರುದ್ಧ ಗುಡುಗಿದ್ದಾರೆ.


ಪುತ್ತೂರು ಬಿಜೆಪಿ ಕಚೇರಿಯಲ್ಲಿ ಅವರು ಸಾರ್ವಜನಿಕ ಅಹವಾಲು ಸ್ವೀಕರಿಸಿದ ಬಳಿಕ ಪತ್ರಿಕಾ ಮಾದ್ಯಮದ ಜೊತೆ ಮಾತನಾಡಿದರು. ರಾಜ್ಯದ ಸಚಿವ ಚೆಲುವರಾಯ ಸ್ವಾಮಿ ಅವರ ಮೇಲೆ ಅಧಿಕಾರಿಗಳೇ ಭ್ರಷ್ಟಾಚಾರದ ಆರೋಪ ಹೊರಿಸಿದ್ದಾರೆ. ಮಂತ್ರಿಗಳು ಅಧಿಕಾರಿಗಳನ್ನು ದಬ್ಬಾಳಿಕೆ ಮಾಡುತ್ತಿದ್ದಾರೆ. ಸಚಿವರ ಮೇಲೆ ಎಫ್‌ಐಆರ್ ಆದರೂ ಅವರಲ್ಲಿ ರಾಜೀನಾಮೆ ಕೇಳುವ ಯೋಗ್ಯತೆ ಸರಕಾರಕ್ಕಿಲ್ಲ. ಜೊತೆಗೆ ಸರಕಾರ ಮೌನವಾಗಿ ಕೂತಿದೆ. ಒಟ್ಟಿನಲ್ಲಿ ಈ ಸರಕಾರ ಭ್ರಷ್ಟಾಚಾರಿಗಳ ಕೂಟದ ಸರಕಾರವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುದ್ದಿವಂತಿಕೆ ನಡೆಸುತ್ತಿದ್ದಾರೆ. ಭ್ರಷ್ಟಾಚಾರ ಆರೋಪಗಳ ಮಧ್ಯೆಯೇ ಕೆಲಸ ನಡೆಯುತ್ತಿದೆ. ಪ್ರತಿಯೊಬ್ಬರ ಭ್ರಷ್ಟಾಚಾರ ಆರೊಪ ಇರುವ ಸಚಿವರ ಮೇಲೆ ಕೇಸು ದಾಖಲಿಸುವುದು ಬಿಟ್ಟು, ಭ್ರಷ್ಟಾಚಾರದ ಬಗ್ಗೆ ಬರೆದರೆ ಮಾಧ್ಯಮದವರ, ಸಾಮಾಜಿಕ ಜಾಲತಾಣದವರ ಕೇಸು ಹಾಕುವ ಕೆಲಸ ಮಾಡುವ ಮೂಲಕ ರಾಜ್ಯ ಸರಕಾರ ಭ್ರಷ್ಟಾಚಾರವನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡುತ್ತಿದೆ ಎಂದು ಅವರು ಹೇಳಿದರು.

ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಜಿಲ್ಲಾ ಪ್ರಭಾರಿ ಗೋಪಾಲಕೃಷ್ಣ ಹೇರಳೆ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲದ ಅಧ್ಯಕ್ಷ ಪಿ.ಜಿ. ಜಗನ್ನಿವಾಸ ರಾವ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಬಿಜೆಪಿ ಹಿಂದುಳಿದ ಮೋರ್ಚಾದ ಜಿಲ್ಲಾಧ್ಯಕ್ಷ ಆರ್.ಸಿ.ನಾರಾಯಣ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಬೂಡಿಯಾರ್ ರಾಧಾಕೃಷ್ಣ ರೈ, ಜಿಲ್ಲಾ ಸಮಿತಿ ಸದಸ್ಯ ಚಂದ್ರಶೇಖರ್ ರಾವ್ ಬಪ್ಪಳಿಗೆ, ನಗರಸಭೆ ನಿಕಟಪೂರ್ವ ಅಧ್ಯಕ್ಷ ಕೆ.ಜೀವಂಧರ್ ಜೈನ್,ಹಿರಿಯರಾದ ಎಸ್.ಅಪ್ಪಯ್ಯ ಮಣಿಯಾಣಿ,ರಾಜೇಶ್ ಬನ್ನೂರು, ಪುರುಷೋತ್ತಮ ಮುಂಗ್ಲಿಮನೆ, ಯುವರಾಜ್ ಪೆರಿಯತ್ತೋಡಿ, ನಿತೀಶ್ ಕುಮಾರ್ ಶಾಂತಿವನ, ಜಯಶ್ರೀ ಎಸ್ ಶೆಟ್ಟಿ, ದೀಕ್ಷಾ ಪೈ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here