ಧಾರ್ಮಿಕ ಶ್ರದ್ಧಾ ಕೇಂದ್ರಗಳ ಕಾರ್ಯಕ್ರಮಗಳಿಂದ ಯುವಸಮುದಾಯದಲ್ಲಿ ಪರಿವರ್ತನೆ ಸಾಧ್ಯ: ಮಾಣಿಲ ಶ್ರೀ
ವಿಟ್ಲ: ಧಾರ್ಮಿಕ ಶ್ರದ್ಧಾಕೇಂದ್ರಗಳಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದರಿಂದ ಯುವ ಸಮುದಾಯದಲ್ಲಿ ಪರಿವರ್ತನೆ ಸಾಧ್ಯವಿದೆ. ಶರನ್ನವರಾತ್ರಿಯ ಬೆಳ್ಳಿಹಬ್ಬ ಮಹೋತ್ಸವ ಅಕ್ಟೋಬರ್ 15 ರಿಂದ 25 ರವರೆಗೆ ನಡೆಯಲಿದೆ ಎಂದು ಮಾಣಿಲ ಶ್ರೀಧಾಮ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದರು.
ಅವರು ಮಾಣಿಲ ಶ್ರೀಧಾಮ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ವೃತಾಚರಣೆಯ ಬೆಳ್ಳಿಹಬ್ಬ ಮಹೊತ್ಸವ ಅವಲೋಕನ ಸಭೆಯಲ್ಲಿ ಆಶೀರ್ವಚನ ನೀಡಿದರು.
ಅಧ್ಯಕ್ಷತೆಯನ್ನು ಬೆಳ್ಳಿ ಹಬ್ಬ ಸಮಿತಿಯ ಕೇಂದ್ರ ಸಮಿತಿ ಅಧ್ಯಕ್ಷ ಮೋನಪ್ಪ ಭಂಡಾರಿ ವಹಿಸಿದ್ದರು. ಉಪಾಧ್ಯಕ್ಷೆ ಕಸ್ತೂರಿ ಪಂಜ, ಮಹಿಳಾ ಸಮಿತಿ ಗೌರವಾಧ್ಯಕ್ಷೆ ರೇವತಿ ಪೆರ್ನೆ, ಮಂಗಳೂರು ಸಮಿತಿಯ ಕಾರ್ಯದರ್ಶಿ ಮಹೇಶ್ ಜೋಗಿ, ರಾಜೇಶ್ ಬಾಳೆಕಲ್ಲು ಉಪಸ್ಥಿತರಿದ್ದರು.
ಸಂಚಾಲಕರಾದ ತಾರನಾಥ ಕೊಟ್ಟಾರಿ ಸ್ವಾಗತಿಸಿದರು. ಸಮಿತಿಯ ಕೊಶಾಧಿಕಾರಿ ಜಯಪ್ರಕಾಶ್ ಮಂಗಳೂರು ಲೆಕ್ಕಪತ್ರ ಮಂಡಿಸಿದರು. ಮಹಿಳಾ ಸಮಿತಿ ಅಧ್ಯಕ್ಷೆ ವನಿತಾ ವಿ. ಶೆಟ್ಟಿ ವಂದಿಸಿದರು.