





ವಿಟ್ಲ: ಸಾರ್ವಜನಿಕ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ದೇರಳಕಟ್ಟೆ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆ ನಡೆದ ತಾಲೂಕು ಹಾಗೂ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟದಲ್ಲಿ ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ಶ್ರೀ ಗುರುದೇವ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ,ಕರಾಟೆ ಪಟು ತೇಜಸ್ ಬಿ. ಕನ್ಯಾನರವರು ಚಿನ್ನದ ಪದಕ ಗೆದ್ದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ನಂದಿನಿ ಬಾಲಪ್ಪ ದಂಪತಿಯ ಪುತ್ರರಾಗಿದ್ದು, ದಕ್ಷತ್ ಗೌಡ ಕಾಣಿಚ್ಚಾರು ರವರಿಂದ ತರಬೇತಿ ಪಡೆದಿದ್ದಾರೆ.












