ತಾಲೂಕು ಆಡಳಿತದಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ-ಸಂವಿಧಾನದ ಪೀಠಿಕೆ ವಾಚನ

0

ಪುತ್ತೂರು:ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಸೆ.15ರಂದು ಪುತ್ತೂರು ತಾಲೂಕು ಆಡಳಿತದ ವತಿಯಿಂದ ಭಾರತ ಸಂವಿಧಾನ ಪೀಠಿಕೆಯ ಜಾಗತಿಕ ವಾಚನದ ಮೂಲಕ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸಲಾಯಿತು.


ಸಹಾಯಕ ಆಯುಕ್ತ ಗಿರೀಶ್ ನಂದನ್‌ರವರು ಭಾರತ ಸಂವಿಧಾನ ಪೀಠಿಕೆಯ ಜಾಗತಿಕ ವಾಚನ ಬೋಧಿಸಿದರು. ಬಳಿಕ ಮಾತನಾಡಿದ ಅವರು, ಭಾರತದ ಸಂವಿಧಾನ ವಿಶ್ವದ ಅತೀ ದೊಡ್ಡ ಹಾಗೂ ಪ್ರಾಮುಖ್ಯತೆ ಪಡೆದ ಸಂವಿಧಾನವಾಗಿದೆ. ನಮ್ಮ ಸಂವಿಧಾನದಲ್ಲಿ ಸಮಾನತೆಯ ಪಾಠವಿದೆ. ಮೂಲಭೂತ ಹಕ್ಕುಗಳು ಜೊತೆಗೆ ಕರ್ತವ್ಯಗಳನ್ನು ತಿಳಿಸಲಾಗಿದೆ. ಸಂವಿಧಾನ ದಿನಾಚರಣೆಯ ಮೂಲಕ ಯುವ ಜನತೆಗೆ ಅರಿವು ಮೂಡಿಸುವ ಕಾರ್ಯಕ್ರಮವಾಗಿದೆ. ಸಂವಿಧಾನದಲ್ಲಿ ಸೂಚಿಸಿದ ಮೂಲಭೂತವಾಗಿರುವ ಕರ್ತವ್ಯಗಳನ್ನು ನಿಭಾಯಿಸಿದಾಗ ಹಕುಗಳನ್ನು ಪಡೆಯಲು ಅರ್ಹರಾಗಿರುತ್ತಾರೆ. ನಮ್ಮ ಹಕ್ಕುಗಳಿಗೆ ತೊಂದರೆ ಆದಾಗ ಸಂವಿಧಾನಾತ್ಮಕವಾಗಿ ಪಡೆಯಬಹುದಾಗಿ ಎಂದರು.
ತಹಶೀಲ್ದಾರ್ ಜೆ. ಶಿವಶಂಕರ್, ತಾ.ಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಎಲ್ಲಾ ಇಲಾಖಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಕೃಷ್ಣ ಸ್ವಾಗತಿಸಿದರು. ತಾಲೂಕು ಕಚೇರಿಯ ದಯಾನಂದ ವಂದಿಸಿದರು.

LEAVE A REPLY

Please enter your comment!
Please enter your name here